15 ದಿನಗಳಲ್ಲಿ ಸಂಪೂರ್ಣ ವರದಿ ನೀಡಿ: ಮೂರ್ತಿ
ಕೊಪ್ಪಳ 01: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಚೆಕ್ ಡ್ಯಾಂಗಳ ಕುರಿತು ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ಕೈಗೊಂಡ ತನಿಖೆ ಕಾರ್ಯವನ್ನು ಪೂರ್ಣಗೊಳಿಸಿ ಇನ್ನು 15 ದಿನಗಳಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಗುಣ ನಿಯಂತ್ರಣ ತಂಡವದರೊಂದಿಗೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 635 ಚೆಕ್ ಡ್ಯಾಂಗಳಲ್ಲಿ 338 ಚೆಕ್ ಡ್ಯಾಂಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ತನಿಖೆ ಕಾರ್ಯ ಮುಗಿದಿದೆ. ಇನ್ನೂ 297 ಚೆಕ್ ಡ್ಯಾಂಗಳ ತನಿಖೆ ಬಾಕಿ ಇದ್ದು, 15 ದಿನದೊಳಗೆ ಎಲ್ಲ ಚೆಕ್ ಡ್ಯಾಂಗಳ ತನಿಖೆಯನ್ನು ಪೂರ್ಣಗೊಳಿಸಿ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿ ಎನ್.ಕೆ. ತೊರವಿ ಸೇರಿದಂತೆ ಜಿಲ್ಲಾ ಗುಣ ನಿಯಂತ್ರಣ ತಂಡದ ಅಧಿಕಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 