ಗ್ಲೋಬಲ್ ಶಾಲೆಯ ಪ್ರಾಂಶುಪಾಲಗೆ ರಾಷ್ಟ್ರೀಯ ಪ್ರಶಸ್ತಿ
Global School Principal Wins National Award
ಹೂವಿನಹಡಗಲಿ 15: ತಾಲೂಕಿನ ಹೊಳಗುಂದಿ ಗ್ರಾಮದ ಗ್ಲೋಬಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಥಾಮಸ್ ಸಂತೋಷ್ ಅವರಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ಭಾನುವಾರ ಸೌತ್ ಇಂಡಿಂ ಯನ್ ವಿಭಾಗದ ನ್ಯಾಷನಲ್ ಸ್ಕೂಲ್ ಅವಾರ್ಡ್ಸ ಕಾರ್ಯಕ್ರಮದಲ್ಲಿ ಉತ್ತಮ ಆಡಳಿತ, ಶೈಕ್ಷಣಿಕ ನಿಷ್ಠೆ ಹಾಗೂ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಿ ಅತ್ಯುತ್ತಮ ಪ್ರಾಂಶುಪಾಲರ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಥಾಮಸ್ ಸಂತೋಷ್ ಅವರು ಶಾಲೆಯ ಶೈಕ್ಷಣಿಕ ಮಟ್ಟ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಪ್ರಶಸ್ತಿ ಪಡೆದ ಥಾಮಸ್ ಸಂತೋಷ್ ಅವರಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಿ. ಅಬ್ದುಲ್ ರಫಿ, ಆಡಳಿತಾಧಿಕಾರಿ ಡಿ. ಕರೀಂ ಸಾಹೇಬ ಸೇರಿದಂತೆ ಶಿಕ್ಷಕರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 