ಕಾಳಿಕಾ ದೇವಿಯ ಗಂಗೆಸ್ಥಳ ಮೆರವಣಿಗೆ
Goddess Kalika's Gangestala procession
ಕಂಪ್ಲಿ 22: ಪಟ್ಟಣದ 8/9ನೇ ವಾರ್ಡಿನ ಕೆಇಬಿ ಪಕ್ಕದಲ್ಲಿರುವ ಆರಾಧ್ಯ ದೇವತೆ ಶ್ರೀ ಕಾಳಿಕಾದೇವಿ ದೇವಿ ಗಂಗೆಸ್ಥಳ ಮೆರವಣಿಗೆ ಅತ್ಯಂತ ಶ್ರದ್ಧಾಭಕ್ತಿಯಿಂದ ಶುಕ್ರವಾರ ಜರುಗಿತು. ಇಲ್ಲಿನ ಕಂಪ್ಲಿ-ಕೋಟೆಯ ತುಂಗಭದ್ರ ನದಿಯಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ ಮೆರವಣಿಗೆ ಪಟ್ಟಣ ಪ್ರಮುಖ ರಸ್ತೆಗಳಲ್ಲಿ ಸಾಗಿ, ನಡುವಲ ಮಸೀದಿ, ಡಾ.ರಾಜಕುಮಾರ ಮುಖ್ಯರಸ್ತೆ, ಮಾರೆಮ್ಮ ಗುಡಿ, ಅಂಬೇಡ್ಕರ್ ವೃತ್ತದ ಮೂಲಕ ಕಾಳಿಕಾದೇವಿ ದೇವಿ ಸನ್ನಿಧಾನದಲ್ಲಿ ಸಂಪನ್ನಗೊಂಡಿತು. ಈ ಮೆರವಣಿಗೆಯಲ್ಲಿ ಸುಮಂಗಲಿಯರ ಕುಂಭ, ಕಳಸ, ಡೊಳ್ಳು ಕುಣಿತ, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ಇಲ್ಲಿನ ಗಂಗೆಸ್ಥಳ ನಿಮಿತ್ಯ ದೇವಿಯ ಸನ್ನಿಧಾನದಲ್ಲಿ ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕಾರ್ಯಗಳು ಶಾಸ್ತ್ರೋಸ್ತವಾಗಿ ನೆರವೇರಿದವು. ಸಾಕಷ್ಟು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಕಾಯಿ, ಕರ್ಪೂರ ಅರ್ಪಿಸಿ, ದೇವಿಯ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಕಾಳಿಕಾದೇವಿ ದೇವಸ್ಥಾನ ಸಮಿತಿಯವರು ಸೇರಿದಂತೆ ಸಕಲ ಸದ್ಭಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 