ಬಳ್ಳಾರಿ

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಸ್ಥಾಪನೆಯ ಸುವರ್ಣ ಮಹೋತ್ಸವ ವರ್ಷ

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಸ್ಥಾಪನೆಯ ಸುವರ್ಣ ಮಹೋತ್ಸವ ವರ್ಷ

ಬಳ್ಳಾರಿ, 6: 2024 ಅಕ್ಟೋಬರ್ 2 ರಿಂದ 2ನೇ ಅಕ್ಟೋಬರ್ 2025 ಸಂದರ್ಭದಲ್ಲಿ ಒಂದು ವರ್ಷ ಕಾಲ ಜನಾಂದೋಲನ ನಡೆಸಿ, ಜನತೆಯ ಮುಂದೆ ಸೆಮಿನಾರ್, ಸಭೆಗಳು, ಇತರ ಕಾರ್ಯಕ್ರಮಗಳನ್ನು ವರ್ಷವಿಡಿ ಹಮ್ಮಿಕೊಂಡು ಸುವರ್ಣ ಮಹೋತ್ಸವ ಆಚರಿಸಲು  ಮೂರು ಸಂಘಗಳು ಂಋಖಃಇಂ ಕರೆಯ ಮೇರೆಗೆ ತೀರ್ಮಾನಿಸಲಾಗಿದೆ. 

ಅಖಿಲ ಭಾರತ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ನೌಕರರ ಸಂಘ (ಂಋಖಃಇಂ)ದ ಕರೆಯ ಮೇರೆಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಅಧಿಕಾರಿಗಳ ಸಂಘ ಹಾಗೂ ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಗ್ರಾಮೀಣ ಬ್ಯಾಂಕ್‌ಗಳ ಸ್ಥಾಪನೆಯ ಸುವರ್ಣ ಮಹೋತ್ಸವ ವರ್ಷವನ್ನು ಸೂಕ್ತ ರೀತಿಯಲ್ಲಿ ಆಚರಿಸಲು ನಿರ್ಧರಿಸಿದೆ. 

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಅಧಿಕಾರಿಗಳ ಸಂಘ ಹಾಗೂ ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಬಳ್ಳಾರಿ ನಗರದ ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಗಾಂಧಿ ಪ್ರತಿಮೆಗೆ ಹೂವಿನಹಾರವನ್ನು ಸರ್ಮಪಣೆ ಮಾಡುವುದರ ಮೂಲಕ ತಮ್ಮ ರಾಷ್ಟ್ರೀಯ ಕರೆಗೆ ಚಾಲನೆ ನೀಡುವುದರ ಮೂಲಕ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. 

ಈ ಸುವರ್ಣ ಮಹೋತ್ಸವದ ವರ್ಷದಲ್ಲಿ ಬಳ್ಳಾರಿಯಲ್ಲಿ ರಾಜ್ಯ ಒಕ್ಕೂಟದ ವತಿಯಿಂದ ಅಖಿಲ ಭಾರತದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ ದ ಅಖಿಲ ಭಾರತ ಸಮ್ಮೇಳನವನ್ನು ಫೆಬ್ರವರಿ 2025ರಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ದೇಶದ ವಿವಿಧ ಗ್ರಾಮೀಣ ಬ್ಯಾಂಕ್‌ಗಳಲ್ಲಿನ ಸಾವಿರಾರು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನೀರೀಕ್ಷೆ ಇದೆ. ಸುವರ್ಣ ಮಹೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲು ಜನಪ್ರತಿನಿಧಿಗಳು, ಆರ್ಥಿಕ ಚಿಂತಕರು, ಪ್ರಗತಿಪರ ಗ್ರಾಹಕರನ್ನು ಒಳಗೊಂಡಂತೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೀರ್ತಿರಾಜ್ ಹಿಡಕಲ್ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಮದಕುಂಟೆ ತಿಳಿಸಿದ್ದಾರೆ.  


ಸುದ್ದಿ ಓದಿ