ಶ್ರದ್ಧೆ, ನಿಷ್ಠೆಯಿಂದ ಉತ್ತಮ ಸಾಧನೆ ಸಾಧ್ಯ: ಡಾ.ಸೊನೊಳಿ
ಬಳ್ಳಾರಿ 23: ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ನಿಷ್ಠೆಯಿಂದ ಅಭ್ಯಾಸ ಮಾಡುವುದರ ಮೂಲಕ ಸ್ನಾತ್ತಕೋತ್ತರ ಪದವಿಯಲ್ಲಿ ಉತ್ತಮ ಸಾಧನೆ ತೋರಬೇಕು ಎಂದು ಉಪಪ್ರಾಂಶುಪಾಲರು ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಡಾ.ಸವಿತಾ ಸೊನೊಳಿ ಹೇಳಿದರು.
ನಗರದ ಪ್ರತಿಷ್ಠಿತ ರಾವ್ ಬಹದ್ದೂರ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ವಿದ್ಯುನ್ಮಾನ ಮತ್ತು ಸಂಪರ್ಕ ವಿಭಾಗದಿಂದ ಸ್ನಾತ್ತಕೋತ್ತರ ವಿದ್ಯಾರ್ಥಿಗಳ ತರಗತಿಯ ಉದ್ಘಾಟನಾ ಸಮಾರಂಭವು ಜರುಗಿತು. ಈ ವೇಳೆ ಡಾ. ಸವಿತ ಸೊನೊಳಿ ಅವರು ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿಯ ಕುರಿತಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಜೆ.ಎಸ್ ಬಸವರಾಜ್, ಆಡಳಿತ ಮಂಡಳಿಯ ಸದಸ್ಯರಾದ ಅರವಟಿಗಿ ಫ್ರಭು, ಮತ್ತು ಕೆ.ಎಮ್. ಶಿವಮೂರ್ತಿ ನೂತನ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಶುಭಕೋರಿದರು. ಪ್ರಾಚಾರ್ಯರಾದ ಡಾ. ಕುಪ್ಪಗಲ್ ವೀರೇಶ್, ಪ್ರೊ.ಡಾ. ಪ್ರಭಾವತಿ. ಎಸ್, ಡಾ.ಜೇರ್ವಗಿ ಪಕೀರಪ್ಪ, ಡಾ.ಕೊಟ್ರೇಶ್, ವಿವಿಧ ವಿಭಾಗದ ಮುಖ್ಯಸ್ಥರು ಅನುಸುಯಾ ಪಾಟೀಲ್ ಉಪಸ್ಥಿತರಿದ್ದರು.
ಉಪನ್ಯಾಸಕಿ ವಾಣಿ .ಹೆಚ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಾರದ ಸಂತೋಷ್ ಮುಗಳಿ ವಂದಿಸಿದರು. ವಿದ್ಯಾರ್ಥಿನಿ ಮೇಘನ ಪಾರ್ಥಿಸಿದರು. ಬೋಧಕ, ಬೋಧಕೇತರರ ಸಿಬ್ಬಂದಿ ಉಪಸ್ಥಿತರಿದ್ದರು.