ಬಳ್ಳಾರಿ

ಇಂದು ಸರ್ಕಾರಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ

ಇಂದು  ಸರ್ಕಾರಿ  ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ
ಬಳ್ಳಾರಿ 26: ಸರ್ಕಾರಿ ಆದರ್ಶ ವಿದ್ಯಾಲಯ ಬಳ್ಳಾರಿ 2021 -22 ನೇ ಸಾಲಿಗೆ 6ನೇ ತರಗತಿ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27ರಂದು ಬೆಳಿಗ್ಗೆ 10.30 ಗಂಟೆಯಿಂದ 1 ಗಂಟೆಯವರೆಗೆ ನೂತನ ಖ.ಓ.ಕ ಪ್ರಕಾರ ಬಳ್ಳಾರಿಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಈಗಾಗಲೇ ತಿಳಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ವೆಬ್‌ಸೈಟ್ www.schooleducation.kar.nic.in ಅಥವಾ www.vidyavahini.karnataka.gov.in ನಲ್ಲಿ ವಿದ್ಯಾರ್ಥಿಯ ಸ್ಯಾಟ್ಸ್‌ ನಂಬರ್ ಅಥವಾ ಅಪ್ಲಿಕೇಶನ್ ಸಂಖ್ಯೆ ಹಾಕಿ ಡೌನ್ಲೋಡ್ ಮಾಡಿಕೊಂಡು ಯಾವ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು ಈ ಕುರಿತು ಈಗಾಗಲೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಬಳ್ಳಾರಿ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಗುರುಗಳಾದ ಆಂಜನೇಯ ಕೆ.ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಓದಿ