ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಫಯಾಜ್ ಅಲಾಸೆ ತಾಲೂಕಿಗೆ ಫಸ್ಟ್
Government High School student Fayyaz Alase is first in the taluk.
ಪಾಲಬಾವಿ 17: ಕಳೆದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಜರುಗಿದ ಸನ್.2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-01ರಲ್ಲಿ ರಾಯಬಾಗ ತಾಲೂಕಿನ ಶಿರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವೈಷ್ಣವಿ ದಳವಾಯಿ ಹಾಗೂ ಫಯಾಜ್ ಅಲಾಶೆ ಇಬ್ಬರೂ ಒಂದೇ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 617 ಅಂಕಗಳನ್ನು ಪಡೆದು (98.72ಅ) ಪ್ರತಿಶತದೊಂದಿಗೆ ರಾಯಬಾಗ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಗಳಲ್ಲಿಯೇ ಪ್ರಥಮ ಸ್ಥಾನವನ್ನು ಇಬ್ಬರೂ ವಿದ್ಯಾರ್ಥಿಗಳು ಹಂಚಿಕೊಂಡಿದ್ದರು.
ಫಯಾಜ್ ಕಲಂದರ್ ಅಲಾಸೆ ವಿದ್ಯಾರ್ಥಿಯು ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ-01ರ ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯಕ್ಕೆ 01 ಅಂಕ ಹೆಚ್ಚಳ 98+1=99. ಸಮಾಜ ವಿಜ್ಞಾನ ವಿಷಯದಲ್ಲಿ 01 ಅಂಕ ಹೆಚ್ಚಳ 99+1=100 ಒಟ್ಟಾರೆ 619 (99.04ಅ)ಅಂಕಗಳನ್ನು ಪಡೆದು ರಾಯಬಾಗ ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾನೆ ಎಂದು ಬಿಇಓ ಬಸವರಾಜಪ್ಪ.ಆರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ.ಆರ್, ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜ ಕಾಂಬಳೆ, ಇಸಿಓ ವಿಠ್ಠಲ ತೇರದಾಳ, ಲಕ್ಷ್ಮಣ ಬಿದರಿ, ಮನೋಹರ ಪೂಜಾರಿ, ಸಿಆರಿ್ಪಗಳಾದ ಷಣ್ಮುಖ ನಾವಿ, ಎಸ್ಡಿಎಂಸಿ ಉಪಾಧ್ಯಕ್ಷ ಬಸು ಮುರಡಿ, ಮುಖ್ಯೋಪಾಧ್ಯಾಯ ಬಿ.ಎ.ಪಾಟೀಲ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 