ನೆಟ್ ಬಾಲ ಕ್ರೀಡೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಗದಗ 22: ನೆಟ್ ಬಾಲ ಕ್ರೀಡೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಬಾಲಕ-ಬಾಲಕಿಯರು ತಂಡದ ಗಮನಾರ್ಹ ಸಾಧನೆ; ಶಾಲೆಗೆ ಕೀರ್ತಿ ತಂದ ಕ್ರೀಡಾಪಟುಗಳು ತಾಲೂಕಿನ ಹಿರೇ ಅಣಜಿ ಸರ್ಕಾರಿ ಪ್ರೌಢಶಾಲೆಯ ಶಾಲೆಯ ಬಾಲಕ ಬಾಲಕಿಯರು ನೆಟ್ ಬಾಲ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಮಧುಗಿರಿ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ತಾಲೂಕು ಹಾಗೂ ಜಿಲ್ಲಾ ಮಟ್ಟದ ನೆಟ್ ಬಾಲ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸರ್ಕಾರಿ ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡದ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕ ಬಸವರಾಜ ಬಸಪ್ಪನವರ ಹೇಳಿದರು.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಸೀಮಿತ ಸೌಲಭ್ಯಗಳ ನಡುವೆಯೂ ವಿದ್ಯಾರ್ಥಿಗಳು ಕಠಿಣ ತರಬೇತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕ್ರೀಡೆಯ ಜೊತೆಗೆ ಶಿಕ್ಷಣದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು ಎಂದು ಶಿಕ್ಷಕರು ಶುಭ ಹಾರೈಸಿದರು.ರಾಜ್ಯಮಟ್ಟದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ತಾಲೂಕು ಹಾಗೂ ಜಿಲ್ಲೆಯ ಕೀರ್ತಿ ಹೆಚ್ಚಿಸಲಿ ಎಂದು ಶಾಸಕ ಬಸವರಾಜ ಶಿವಣ್ಣನವರ ಶುಭ ಹಾರೈಸಿದ್ದಾರೆ.