ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಸರ್ಕಾರಿ ಬಸ್: ಪ್ರಯಾಣಿಕರು ಪಾರು
Government bus crashes into roadside field: Passengers escape
ಕೊಪ್ಪಳ, ಆ.9: ಕೊಪ್ಪಳದಿಂದ ಕರ್ಕಿಹಳ್ಳಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಈ ಭಾಗದಲ್ಲಿ ರಸ್ತೆ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ರಸ್ತೆ ತಗ್ಗು-ದಿನ್ನೆಗಳಿಂದ ಕೂಡಿದೆ. ಇದರಿಂದ ವಾಹನ ಸವಾರರು ಪ್ರತಿನಿತ್ಯ ಪರದಾಡುವಂತಾಗಿದೆ. ಇದೇ ರಸ್ತೆಯಲ್ಲಿ ಈ ಹಿಂದೆ ಬಸ್ ಪಲ್ಟಿಯಾದ ಘಟನೆ ಕೂಡ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ಶಾಲೆಗಳಿಗೆ ರಜೆ ಇದ್ದ ಕಾರಣ ವಿದ್ಯಾರ್ಥಿಗಳು ಸಂಚರಿಸಿರಲಿಲ್ಲ. ಆದರೆ ಸಾಮಾನ್ಯ ದಿನಗಳಲ್ಲಿ ಈ ಮಾರ್ಗದಲ್ಲಿ 150ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಸಂಚರಿಸುತ್ತಾರೆ ಎನ್ನಲಾಗಿದೆ. ಹೀಗಾಗಿ ರಸ್ತೆ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.
ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸುವ ಮುನ್ನ ರಸ್ತೆ ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 