ಬಳ್ಳಾರಿ

ಮಹಿಳೆಯರ ಕಲ್ಯಾಣಕ್ಕೆ ಸರ್ಕಾರವು ಬದ್ಧ: ಸಚಿವ ಶ್ರೀರಾಮುಲು

ಮಹಿಳೆಯರ ಕಲ್ಯಾಣಕ್ಕೆ ಸರ್ಕಾರವು ಬದ್ಧ: ಸಚಿವ ಶ್ರೀರಾಮುಲು

ಬಳ್ಳಾರಿ 14: ಮಹಿಳೆಯರ ಸುರಕ್ಷತೆ ಮತ್ತು ಆರ್ಥಿಕ ಸ್ವಾವಲಂಬನೆಯಾಗಿ ಉದ್ಯೋಗ ಕೈಗೊಳ್ಳಲು ಸರ್ಕಾರದ ಮುಖ್ಯ ಅದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳೆಯರು ಅವುಗಳನ್ನು ಬಳಸಿಕೊಂಡು ಮುಂದೆ ಬರಬೇಕು ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸಹಯೋಗದಲ್ಲಿ ಅಮೃತ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಬೀಜಧನ ಸಹಾಯಧನ ವಿತರಣೆ ಕಾರ್ಯಕ್ರಮ, ಎನ್‌ಆರ್‌ಎಲ್‌ಎಂ ಯೋಜನೆಯಡಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಮೊದಲ ತಂಡವಾಗಿ 27 ಮಹಿಳೆಯರಿಗೆ ಘನ ದ್ರವ ತ್ಯಾಜ್ಯ ನಿರ್ವಹಣೆ(ಖಠಜ ಐಡಣಜ ತಿಛಿಣಜ ಟಚಿಟಿಚಿರಜಟಜಟಿಣ )ಯ ನಾಲ್ಕು ಚಕ್ರ ವಾಹನ ಚಲಾವಣೆ ಪರವಾನಿಗೆ ವಿತರಣೆ ಕಾರ್ಯಕ್ರಮ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 100 ಮಹಿಳೆಯರಿಗೆ ಟೈಲರಿಂಗ್ ಯಂತ್ರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ಮಹಿಳೆಯರು ಗುಂಪುಗಳಾಗಿ ಒಗ್ಗೂಡಿ ಸ್ವಾವಲಂಬನೆಯಾಗಿ ಉದ್ಯೋಗ ಹಾಗೂ ಇತರೆ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಆರ್ಥಿಕವಾಗಿ ಅಶಕ್ತರನ್ನು ಸ್ವ ಸಹಾಯ ಗುಂಪುಗಳಾಗಿ ಸಂಘಟಿಸಿ, ಅವರನ್ನು ಸ್ವಯಂ ಉದ್ಯೋಗಕ್ಕೆ ಸಮರ್ಥರನ್ನಾಗಿ ಮಾಡುವ ಉದ್ದೇಶ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಓಖಐಒ)ನ ಕಾರ್ಯವಾಗಿದೆ. 

ಈ ಯೋಜನೆ ಆರಂಭ ಆಗಿ 10 ವರ್ಷ ತುಂಬಿರೋ ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ನಮ್ಮ ಮಹಿಳೆಯರಿಗೆ ಶಕ್ತಿ ತುಂಬಲು ಇಂತಹ ಯೋಜನೆಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. 

ದುರ್ಬಲ ವರ್ಗದ ಯುವಕರು ಮತ್ತು ಮಹಿಳೆಯರಿಗೆ ಉದ್ಯೋಗ ಒದಗಿಸುವುದು ಮುಖ್ಯ ಆದ್ಯತೆಯಾಗಿದ್ದು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಒಂದು ದಶಕವನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ, 2022-23 ನೇ ವರ್ಷವನ್ನು ‘ಜೀವನೋಪಾಯ ವರ್ಷ' ಎಂದು ಆಚರಿಸಲಾಗುತ್ತದೆ ಈ ಮಿಷನ್ ಅಡಿಯಲ್ಲಿ ಒಟ್ಟು ರೂ.1100 ಕೋಟಿಗಳ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲಾಗಿದೆ ಎಂದು ವಿವರಿಸಿದರು. 

ಸ್ವ-ಸಹಾಯ ಗುಂಪುಗಳನ್ನು ಸಣ್ಣ ಉದ್ಯಮಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರವು ‘ಅಮೃತ ಯೋಜನೆ’ ಘೋಷಿಸಲಾಗಿದೆ;ಆಯ್ದ ಸ್ವಸಹಾಯ ಗುಂಪುಗಳ ಉದ್ಯಮಶೀಲತೆಯನ್ನ ಮತ್ತಷ್ಟು ಅಭಿವೃದ್ಧಿಪಡಿಸಲು ಮತ್ತು ಅವುಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು ರೂ.1.5 ಲಕ್ಷ ಸಹಾಯವನ್ನು ನೀಡಲಾಗುತ್ತದೆ ಇದಕ್ಕಾಗಿ ಈ ವರ್ಷ 500 ಕೋಟಿ ಅನುದಾನ ಮೀಸಲಿಡಲಾಗಿದೆ  

ಪರಿಶಿಷ್ಟ ಜಾತಿ ಮತ್ತು ಪಂಗಡದ ಸ್ವ ಸಹಾಯ ಗುಂಪುಗಳಿಗೆ ವಿಶೇಷ ಆದ್ಯತೆ ನೀಡಲು ರೂ.50 ಕೋಟಿ ಮೀಸಲಿಡಲಾಗಿದ್ದು, ಈ ಯೋಜನೆಯಿಂದ 3.9ಲಕ್ಷ ಮಹಿಳೆಯರಿಗೆ ಸಹಾಯವಾಗಲಿದೆ ಎಂದು ಹೇಳಿದರು. 

ಮಹಿಳೆಯರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ನಮ್ಮ ಸರ್ಕಾರ ಸಾಲಿನಲ್ಲಿ ರೂ.43,188 ಕೋಟಿಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ ಅವರು, ಸರ್ಕಾರವು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ಕಲ್ಪಿಸಲಿದೆ ಎಂದು ಹೇಳಿದರು. 

ಮಹಿಳಾ ಸ್ವಸಹಾಯ ಸಂಘಗಳು ಅಭಿವೃದ್ಧಿಪಡಿಸಿದ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಆಕರ್ಷಕ ಪ್ಯಾಕೇಜಿಂಗ್ ಮೂಲಕ ಉತ್ತಮ ಮಾರುಕಟ್ಟೆ ಒದಗಿಸಲು ‘ಅಸ್ಮಿಥೆ’ ಹೆಸರಿನಲ್ಲಿ ಮೆಗಾ ಸ್ಕೇಲ್ ಮಾರುಕಟ್ಟೆ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಹೋಬಳಿ/ಜಿಲ್ಲೆ/ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜಿಸಲಾಗುವುದು;ಇದರಲ್ಲಿ ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳಿಗೆ ಸರ್ಕಾರದ ವಿವಿಧ ಇಲಾಖೆಗಳ ಸಂಗ್ರಹಣೆ (ಠಿಡಿಠಣಡಿಜಟಜಟಿಣ) ಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. 

ಸ್ತ್ರೀ ಶಕ್ತಿ ಒಕ್ಕೂಟಗಳ ಸದಸ್ಯರು ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 200 ವರ್ಕ್‌ ಶೆಡ್‌ಗಳನ್ನು ನಿರ್ಮಿಸಲಾಗಿದೆ. 2022-23ರಲ್ಲಿ 750 ವರ್ಕ್‌ ಶೆಡ್‌ಗಳನ್ನು ಹೆಚ್ಚುವರಿಯಾಗಿ ನಿರ್ಮಿಸಲಾಗುವುದು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರೋತ್ಸಾಹಿಸಲು, ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಸರ್ಕಾರಿ ಕಚೇರಿ ಸಂಕೀರ್ಣದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಂದ ನಿರ್ವಹಿಸಲ್ಪಡುವ ಕ್ಯಾಂಟೀನ್ ಮತ್ತು ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುವುದು ಒಟ್ಟಾರೆಯಾಗಿ ಮಹಿಳೆಯರಿಗೆ ಶಕ್ತಿ ತುಂಬಲು ಸರ್ಕಾರ ಬದ್ಧವಿದ್ದು, ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಸಾರಿಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರೊಂದಿಗೆ ಸಂವಾದ ನಡೆಸಿದರು. 

ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಬೀಜಧನ ಸಹಾಯಧನ ಚೆಕ್ ವಿತರಣೆ ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಯಡಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಮೊದಲ ತಂಡವಾಗಿ 27 ಮಹಿಳೆಯರಿಗೆ ಘನ ದ್ರವ ತ್ಯಾಜ್ಯ ನಿರ್ವಹಣೆ (ಖಠಜ ಐಡಣಜ ತಿಛಿಣಜ ಟಚಿಟಿಚಿರಜಟಜಟಿಣ )ಯ ನಾಲ್ಕು ಚಕ್ರ ವಾಹನ ಚಲಾವಣೆ ಪರವಾನಿಗೆ ವಿತರಣೆ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 2021-22ನೇ ಸಾಲಿನ ಗ್ರಾಮೀಣ ಭಾಗದ ಮಹಿಳೆಯರಿಗೆ ತರಬೇತಿ ಪಡೆದ ಮಹಿಳೆಯರಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 100 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. 

ಈ ಸಂದರ್ಭದಲ್ಲಿ ಕಂಪ್ಲಿ ಕ್ಷೇತ್ರ ಶಾಸಕರಾದ ಜೆ.ಎನ್‌.ಗಣೇಶ್, ಜಿಪಂ ಸಿಇಒ ಜೆ.ಲಿಂಗಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು. 


ಸುದ್ದಿ ಓದಿ