ಜು.11ರಂದು ಗದಗದಲ್ಲಿ ಸರ್ಕಾರಿ ನೌಕರರ ಅಭಿನಂದನಾ ಸಮಾರಂಭ

ಜು.11ರಂದು ಗದಗದಲ್ಲಿ ಸರ್ಕಾರಿ ನೌಕರರ ಅಭಿನಂದನಾ ಸಮಾರಂಭ  Government employees' felicitation ceremony in Gadag on July 11

       ಗದಗ  09:  "ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜು-11ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಮ್ಮಭಿಮಾನದ ಅಭಿನಂದನೆ" ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾಧ್ಯಕ್ಷ ಡಾ.ಬಸವರಾಜ ಬಳ್ಳಾರಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗದಗ ಜಿಲ್ಲೆಯ ಎಲ್ಲ ತಾಲ್ಲೂಕಗಳಿಂದ 12 ಸಾವಿರಕ್ಕೂ ಹೆಚ್ಚು ನೌಕರರು ತೆರಳಲಿದ್ದೇವೆ. ನೌಕರರು ಸಾರಿಗೆ ಬಸ್ ಹಾಗೂ ರೈಲಿನ ಮೂಲಕ ಕಾರ್ಯಕ್ರಮಕ್ಕೆ ಹೊಗಲಿದ್ದು, ಎಲ್ಲ ಖರ್ಚು-ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಗದಗ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇ. 90ಅ ಹೆಚ್ಚು ಅಂಕ ಪಡೆದ 148 ವಿದ್ಯಾರ್ಥಿ/ನಿಯರಿಗೆ ಸನ್ಮಾನ ನಡೆಯಲಿದ್ದು, ಪ್ರತಿಯೊಬ್ಬರಿಗೂ 2 ಸಾವಿರ ರೂಪಾಯಿ ಧನ ನಿಗಧಿ ಮಾಡಲಾಗಿದೆ ಎಂದರು.    

       ಈ ಮಹತ್ವದ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಭಾಗವಹಿಸಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ 2026ನೇ ವರ್ಷದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ 10 ಜಿಲ್ಲೆಗಳ ಸುಮಾರು 3,000 ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಈ ವರ್ಷದ ಪುರಸ್ಕಾರಕ್ಕೆ ರಾಜ್ಯಾದ್ಯಂತ ಒಟ್ಟು 11,000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ವಿವಿಧ ಇಲಾಖೆಗಳ ಪದಾಧಿಕಾರಿಗಳು, ನೌಕರರು ಮತ್ತು ಪೋಷಕರು ಆಗಮಿಸಲಿದ್ದಾರೆ. ಅಭಿನಂದನಾ ಕಾರ್ಯಕ್ರಮದಲ್ಲಿ ಸಂಘದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗುವುದು.    

    ಎನ್‌.ಪಿ.ಎಸ್‌. ಸಮಿತಿಯಿಂದ ತಕ್ಷಣವೇ ವರದಿ ಪಡೆದುಕೊಂಡು, ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿಯೋಜನೆಯನ್ನು (ಓಪಿಎಸ್) ಮರು ಜಾರಿಗೊಳಿಸಬೇಕು ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಪತ್ರ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.     ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಇಲಾಖೆಗಳ ಎಸ್‌ಐಆರ್ ಸಮೀಕ್ಷಾ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಸಿಬ್ಬಂದಿ ಎದುರಿಸುತ್ತಿರುವ ತೀವ್ರ ಮಾನಸಿಕ ಒತ್ತಡ, ಆರೋಗ್ಯ ಮತ್ತು ಸುರಕ್ಷತೆಯ ಸಮಸ್ಯೆಗಳ ಕುರಿತು ಸಂಘವು ಕಳವಳ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದರು. ಈ ವೇಳೆ ಪತ್ರಿಕಾ ಗೋಷ್ಠಿಯಲ್ಲಿ ಡಿ. ಎಸ್ ತಳವಾರ, ಸಿದ್ದಪ್ಪ ಲಿಂಗದಾಳ, ಐ. ಎ ಗಾಡಗೋಳಿ, ಶರಣು ಸಂಗದಾಳ, ಎಂ. ವೈ ಮಲಕಶೆಟ್ಟಿ, ರಾಜು ಕಂಠಿಗೊಣ್ಣನವರ, ಸಂಜೀವಕುಮಾರ ಕುಂದಗೋಳ, ಎಂ. ಎಂ ನಿಟ್ಟಾಲಿ ಸೇರಿದಂತೆ ಇತರರಿದ್ದರು.