ಯುವಕರು ಆರ್ಥಿಕವಾಗಿ ಸ್ವಾವಲಂಬಿಯಾಗಲು ಸರ್ಕಾರದ ಮಾರ್ಗದರ್ಶನ - ಗುರುರಾಜ ಕುಲಕರ್ಣಿ

ಯುವಕರು ಆರ್ಥಿಕವಾಗಿ ಸ್ವಾವಲಂಬಿಯಾಗಲು ಸರ್ಕಾರದ ಮಾರ್ಗದರ್ಶನ - ಗುರುರಾಜ ಕುಲಕರ್ಣಿ  Government guidance for youth to become financially self-reliant - Gururaj Kulkarni

ಲೋಕದರ್ಶನ ವರದಿ 

ಗದಗ 02 : ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯು, ಹಿಂದುಳಿದ ವರ್ಗಗಳ ಜನರಿಗೆ ಮಹತ್ವಾಕಾಂಕ್ಷಿ ಯೋಜನೆ ಅಗಿದೆ, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗದ ಹಕ್ಕನ್ನು ಕೊಡುತ್ತದೆ, ಜೊತೆಗೆ ಶೇ 50ಅ ಹಣ ಓದಗಿಸುವ ಮೂಲಕ ಸಹಾಯ ಒದಗಿಸುತ್ತದೆ ಅಂತಾ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಗುರುರಾಜ ಕುಲಕರ್ಣಿ ಹೇಳಿದರು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಗದಗ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಮತ್ತು ಸ್ವಯಂ ಉದ್ಯೋಗದ ಮೂಲಕ ಜೀವನ ರೂಪಿಸಿಕೊಳ್ಳಲು ಉದ್ಯೋಗ ಸಾರಥಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು. 

ಸ್ವಾವಲಂಬಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಸರ್ಕಾರದ ಸಾಲ ಹಾಗೂ ಸಹಾಯಧನದ ನೆರವಿನಿಂದ ಎಂ-ಪ್ಯಾನಲ್ ಆಗಿರುವ ವಾಹನ ತಯಾರಿಕಾ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ತಮ್ಮ ಅಗತ್ಯಕ್ಕೆ ಅನುಗುಣವಾದ ಕಾರುಗಳನ್ನು ಖರೀದಿಸಿ ಉದ್ಯೋಗ ಆರಂಭಿಸಬಹುದು ಎಂದು ಹೇಳಿದರು. ವಾಹನವನ್ನು ಕೇವಲ ಖರೀದಿಸುವುದಷ್ಟೇ ಅಲ್ಲದೆ, ಅದನ್ನು ಆದಾಯದ ಮೂಲವನ್ನಾಗಿ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು. 

ಸ್ವಾವಲಂಬಿ ಸಾರಥಿ ಯೋಜನೆಯು ನಿರುದ್ಯೋಗ ಸಮಸ್ಯೆಗೆ ಪರಿಹಾರ ನೀಡುವ ಮಹತ್ವದ ಯೋಜನೆಯಾಗಿದ್ದು, ಯುವಕರಿಗೆ ಸ್ವಂತ ಉದ್ಯಮ ಆರಂಭಿಸಲು ಉತ್ತಮ ಅವಕಾಶ ಕಲ್ಪಿಸಿದೆ. ವಾಹನ ಚಾಲನಾ ಸೇವೆ, ಪ್ರವಾಸೋದ್ಯಮ, ಕ್ಯಾಬ್ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಫಲಾನುಭವಿಗಳ ಜೀವನಮಟ್ಟ ಸುಧಾರಣೆಗೆ ನೆರವಾಗಲಿದೆ ಎಂದು ಅವರು ಹೇಳಿದರು.ಸಭೆಯಲ್ಲಿ ಯೋಜನೆಯ ನಿಯಮಗಳು, ಬ್ಯಾಂಕ್ ಸಾಲ ಪ್ರಕ್ರಿಯೆ, ದಾಖಲೆಗಳ ಪರೀಶೀಲನೆ, ವಾಹನ ಆಯ್ಕೆ ಹಾಗೂ ಅನುದಾನ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಯೋಜನೆಯ ಸೌಲಭ್ಯಗಳನ್ನು ಸಮರ​‍್ಕವಾಗಿ ಬಳಸಿಕೊಂಡು ಯಶಸ್ವಿ ಉದ್ಯಮಿಗಳಾಗುವಂತೆ ಫಲಾನುಭವಿಗಳಿಗೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಉಪಸ್ಥಿತರಿದ್ದರು.