ವಿದ್ಯಾರ್ಥಿಗಳು ಆತ್ಮವಿಶ್ವಾಸದೊಂದಿಗೆ ಕಠಿಣ ಪರಿಶ್ರಮ ಪಟ್ಟರೆ ಸರಕಾರಿ ಹುದ್ದೆ ಗ್ಯಾರಂಟಿ
Government jobs are guaranteed if students work hard with confidence
ಆಲಮೇಲ 19: ಯಾವುದೇ ಸರಕಾರಿ ಹುದ್ದೆಗೆ ಆಯ್ಕೆಯಾಗಬೇಕಾದರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಉತ್ತಮವಾದ ರೀತಿಯಲ್ಲಿ ಎದುರಿಸುವ ಮೂಲಕ ಪಡೆಯಲು ಸಾಧ್ಯ ಎಂದು ವಿಸ್ಡಮ್ ಕರಿಯರ ಅಕಾಡೆಮಿಯ ಮಾರ್ಗದರ್ಶಿ ಪ್ರಭುಗೌಡ ಬೋನಾಳ ಹೇಳಿದರು. ಅವರು ತಾಲೂಕಿನ ಮೋರಟಗಿ ಗ್ರಾಮದ ಸಿದ್ಧರಾಮೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಗಾರ ಕುರಿತು ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವ ಆತಂಕ ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಆಗಲು ಅಣಕು ಪರೀಕ್ಷೆಗಳು ನಡೆಸುವದು ಅಲ್ಲದೆ ಯಶಸ್ಸು ಮತ್ತು ವೈಫಲ್ಯ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು .ನನ್ನ ಮಾರ್ಗದರ್ಶನದಲ್ಲಿ ನೂರಾರು ವಿದ್ಯಾರ್ಥಿಗಳು ಪಿಸಿ ಮತ್ತು ಪಿಎಸ್‌ಐ ಆಗಿ ಆಯ್ಕೆ ಆಗಿದ್ದಾರೆ ಎಂದು ಹೇಳಿ ಈ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕೂಡ ಪರೀಕ್ಷೆಗಳನ್ನು ಎದುರಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಆಗಲು ಹಲವು ಮಾರ್ಗದರ್ಶನ ನೀಡಿದರು.
ಉದ್ಘಾಟನೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಬಿ ಎಸ್ ಪಾಟೀಲ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ. ವೀರಭದ್ರ ಗೋಲಾ ಮಾತನಾಡಿ ನಮ್ಮ ಭಾಗದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಉನ್ನತ ಮಟ್ಟದ ಹುದ್ದೆಯ ಕನಸು ನನಸಾಗಲು ಸಲಹೆ ನೀಡಿದರು. ವಿದ್ಯಾರ್ಥಿನಿ ಗೌರಿ ಶಾಬಾದಿ ಪ್ರಾರ್ಥಿಸಿದರು. ಡಾ. ಐ ಜಿ ಕೋಣಸಿರಸಗಿ ಸ್ವಾಗತಿಸಿದರು. ಪ್ರೊ ಆರ್ ವೈ ಕಂಬಾರ ಪ್ರಾಸ್ತಾವಿಕ ಮಾತನಾಡಿದರು. ಪ್ರೊ ವ್ಹಿ. ಎಸ್. ಶಹಾಪುರ ನಿರೂಪಿಸಿದರು ಪ್ರೊ ಎಸ್ ಎಂ ಹರನಾಳ ವಂದಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 