ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಲು ಮುಂದಾದ ಸರ್ಕಾರ: ಸತೀಶ್ ತೀವ್ರ ಆಕ್ಷೇಪ

ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಲು ಮುಂದಾದ ಸರ್ಕಾರ: ಸತೀಶ್ ತೀವ್ರ ಆಕ್ಷೇಪ  Government moves to reinstate Nagendra as minister; Satish strongly objects

ಬಳ್ಳಾರಿ, ಆ.12: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಸುಮಾರು ?187 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರೆ​‍್ಡಗೊಳಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಗೆ ವಿಧಾನ ಪರಿಷತ್ ಸದಸ್ಯ ಎಂ.ವೈ. ಸತೀಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ನಗರದ ಸಂಗನಕಲ್ಲು ರಸ್ತೆಯ ವಾಜಪೇಯಿ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರಾರು ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಹಾಗೂ ವಿತ್‌ಡ್ರಾ ಮಾಡಿರುವ ಆರೋಪಗಳ ತನಿಖೆ ನಡೆಯುತ್ತಿರುವಾಗ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸುವುದು ಸರಿಯಲ್ಲ ಎಂದರು.  

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯೂ ಸಲ್ಲಿಕೆಯಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಬಾರದು ಎಂದು ಮುಖ್ಯಮಂತ್ರಿ ಅವರಿಗೆ ಒತ್ತಾಯಿಸಲಾಗಿದೆ. ನಾಗೇಂದ್ರ ರಾಜೀನಾಮೆ ನೀಡುವವರೆಗೂ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಸತೀಶ್ ಎಚ್ಚರಿಸಿದರು.  ಎಸ್‌ಟಿ ಮೋರ್ಚಾ ಅಧ್ಯಕ್ಷ ದರ​‍್ಪ ನಾಯಕ ಮಾತನಾಡಿ, ನಿಗಮದ ಹಣವನ್ನು ತೆಲಂಗಾಣದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಬಳಿಕ ಡ್ರಾ ಮಾಡಲಾಗಿದೆ ಎಂಬ ಆರೋಪ ಪ್ರಕರಣದ ದಾಖಲೆಗಳಲ್ಲಿ ಉಲ್ಲೇಖವಾಗಿದೆ ಎಂದರು. ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದು ನೋವಿನ ಸಂಗತಿ ಎಂದು ಅವರು ಹೇಳಿದರು.  

ಬಡವರು ಹಾಗೂ ಪರಿಶಿಷ್ಟ ಪಂಗಡಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಪ್ರಭಾವಿ ಸಚಿವ ಸ್ಥಾನದಲ್ಲಿ ಮುಂದುವರಿಸುವುದು ಸರಿಯಲ್ಲ ಎಂದು ಸತೀಶ್ ಹೇಳಿದರು. ಬರಗಾಲದ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅದ್ಧೂರಿ ಸ್ವಾಗತ ಮತ್ತು ರಾಜಕೀಯ ಪ್ರದರ್ಶನಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದೂ ಅವರು ಟೀಕಿಸಿದರು.  ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ. ಸುಂದರ್, ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಒಬಳೇಶ್, ಪಾಲಿಕೆ ಸದಸ್ಯ ಹನುಮಂತಪ್ಪ, ರಾಮಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.