ಬರ ನಿರ್ವಹಣೆಗೆ ಸರ್ಕಾರ ಕೂಡಲೇ ಮುಂದಾಗಲಿ: ಶಾಸಕ ಐಹೊಳೆ
Government must immediately step in for drought management: MLA Aihole
ಚಿಕ್ಕೋಡಿ 16 : ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಸರ್ಕಾರ ಬರ ನಿರ್ವಹಣೆಗೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ. ಸರ್ಕಾರ ಕೂಡಲೇ ಬರ ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಂಡು ರೈತರಿಗೆ ನೆರವಾಗಬೇಕು ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಒತ್ತಾಯಿಸಿದರು. ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಡಾ. ಬಾಬು ಜಗಜೀವನ್ ರಾಮ್ ಭವನದಿಂದ ಬಸಪ್ಪ ಸೆವಸುನೊರೆ ಅವರ ಮನೆಯವರೆಗೆ 20 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಕಾಮಗಾರಿಗೆ ಬುಧವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
ಸಮರ್ಕವಾಗಿ ಮಳೆ ಆಗದೆ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರಕಾರ ಸಮರ್ ವಿದ್ಯುತ್ ಪೂರೈಕೆ ಮಾಡಬೆಕು ಮತ್ತು ದನ ಕರುಗಳಿಗೆ ಮೇವು ಪೂರೈಕೆ ಮಾಡಬೇಕು ಮತ್ತು ಬರಗಾಲ ಎದುರಿಸುವ ಕಾರ್ಯಕ್ರಮ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು. ಬಂಬಲವಾಡ ಗ್ರಾಮದಲ್ಗ್ರಿ ಅಗತ್ಯ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ರಸ್ತೆ ಅಭಿವೃದ್ಧಿಯಿಂದ ಗ್ರಾಮಸ್ಥರಿಗೆ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು ಈ ಸಂದರ್ಭದಲ್ಲಿ ಮುಖಂಡರಾದ ಹಸನ್ ಸನದಿ, ಶಿವರಾಯಿ ಕಮತೆ, ಶಿವಾನಂದ ಪಾಟೀಲ, ಮಲ್ಲು ಕುಂದರಗಿ, ಬರಮಪ್ಪ ಹುಚ್ಚಣ್ಣವರ್, ಕೆಂಪಣ್ಣ ಹಾವಪ್ಪಗೋಲ್, ದಸ್ತಗೀರ್ ಸನದಿ, ರಾಮಗೌಡ ಪಾಟೀಲ, ಬರಮಪ್ಪ ಶೆಟ್ಟಿ, ಉಮೇಶ ಹುಚ್ಚಣ್ಣವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 