ಶಿಗ್ಗಾವ್

ಭಾರತ ಸರ್ಕಾರ ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ

ಭಾರತ ಸರ್ಕಾರ ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ

ಶಿಗ್ಗಾವಿ 22: ಭಾರತ ಸರ್ಕಾರವು ರಾಣಿ ಚೆನ್ನಮ್ಮನಿಗೆ ಸಲ್ಲಿಸುತ್ತಿರುವ ಗೌರವ. ಈ ತ್ವರಿತ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ  ನರೇಂದ್ರ ಮೋದೀಜೀ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯಾ  ಸಿಂಧಿಯಾ ಹಾಗೂ ಕೇಂದ್ರ ಸಂವಹನಾ ಸಚಿವಾಲಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 

ಇದೇ ಅಕ್ಟೋಬರ್ 23 ಕ್ಕೆ, ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ  200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರಾದ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಶ್ವೇಶರ ಹೆಗಡೆ ಕಾಗೇರಿ, ರಾಜ್ಯಸಭಾ ಸಂಸದ ಈರಣ್ಣಾ ಕಡಾಡಿ, ಶಾಸಕರಾದ ಅರವಿಂದ ಬೆಲ್ಲದ , ಅಭಯ ಪಾಟೀಲ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಪ್ರಮುಖರೊಂದಿಗೆ ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಇದೇ 16.10.2024 ರಂದು ಆಗ್ರಹಿಸಲಾಗಿತ್ತು. ತಕ್ಷಣವೇ ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಇದೇ ಅಕ್ಟೋಬರ್ 23ಕ್ಕೆ ಬಿಡುಗಡೆ ಮಾಡಲು ಭಾರತ ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹವಾಗಿದೆ ಎಂದರು. 


ಸುದ್ದಿ ಓದಿ