ಸರಕಾರಿ ಎಂ.ಪಿ.ಎಸ್ ಶಾಲೆ ಉನ್ನತೀಕರಿಸಲು ಸರಕಾರದ ಆದೇಶ
Government order to upgrade government MPS school
ವಿಜಯಪುರ 09: ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಇಂದು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಕ್ಞತೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ ನಮ್ಮೂರಿನಲ್ಲಿಯೇ ಉತ್ತಮ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಬಹುದಿನಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ತುಂಬಾ ಸಂತೋಷವಾಗಿದೆ ಎಂದು ಹೇಳಿದರು. ನಂತರ ಪುಷ್ಪ ಮತ್ತು ಸಿಹಿ ನೀಡಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೇ, ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬದ ಶುಭಾಷಯ ಕೋರಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಸೀತಾರಾಮ ನರಳೆ, ತಾ. ಪಂ. ಮಾಜಿ ಅಧ್ಯಕ್ಷ ಸಿದ್ದು ಬೆಳಗಾವಿ, ಮುಖಂಡರಾದ ರಾಮಗೊಂಡ ಚಾವರ, ಸುರೇಶಗೌಡ ಪಾಟೀಲ, ಸಾಬು ಖಂಡೇಕಾರ, ಸುರೇಶ ಜಾನಾಯಿ, ವಿನೋದ ಕೋಟಿ, ಬೀರ್ಪ ಖಂಡೇಕಾರ, ಬಸವರಾಜ ಕಾತ್ರಾಳ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 