ಯರಗಟ್ಟಿ

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಶಾಸಕ ವಿಶ್ವಾಸ ವೈದ್ಯ

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಶಾಸಕ ವಿಶ್ವಾಸ ವೈದ್ಯ

  ಯರಗಟ್ಟಿ ಜು.7: ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ 68.51 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ವಿಶ್ವಾಸ ವೈದ್ಯ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.  ಈ ವೇಳೆ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ, ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ತಮ್ಮ ಸರ್ಕಾರ ಹಾಗೂ ಕ್ಷೇತ್ರದಲ್ಲಿ ನಿರಂತರ ಆದ್ಯತೆ ನೀಡಲಾಗುತ್ತಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ, ಕುಡಿಯುವ ನೀರು, ಶಿಕ್ಷಣ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.  

ಇತ್ತೀಚಿನ ಮಳೆಯಿಂದ ಹಾನಿಗೊಳಗಾದ ರಸ್ತೆಗಳನ್ನು ದುರಸ್ತಿ ಮಾಡಲು ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿದೆ. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.  

ಜಿಲ್ಲಾ ಪಂಚಾಯಿತಿ ಬೆಳಗಾವಿ ವತಿಯಿಂದ 2024-25ನೇ ಸಾಲಿನ 5054 ಮಳೆ ಪರಿಹಾರ ಯೋಜನೆಯಡಿ ಒಟ್ಟು 68.51 ಲಕ್ಷ ವೆಚ್ಚದಲ್ಲಿ ಬಸಪ್ಪ ಶೀಲವಂತ ಅವರ ಮನೆಯಿಂದ ಕೆರೆಯವರೆಗೆ, ಸಿದ್ದಾರೂಢ ದೇವಸ್ಥಾನದಿಂದ ಯಲ್ಲಪ್ಪ ಹಾದಿಮನಿ ಅವರ ಮನೆವರೆಗೆ ಹಾಗೂ ಗ್ರಾಮದ ಇತರೆ ಐದು ಪ್ರಮುಖ ಓಣಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.  

ಗ್ರಾಮೀಣ ಅಭಿವೃದ್ಧಿಯೇ ಕ್ಷೇತ್ರದ ಸಮಗ್ರ ಪ್ರಗತಿಗೆ ಆಧಾರವಾಗಿದ್ದು, ಜನರ ಬೇಡಿಕೆಗಳಿಗೆ ಸ್ಪಂದಿಸಿ ಅಗತ್ಯ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.  

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ರಾಘು ಗಿಡ್ಡಮಲ್ಲಪ್ಪಗೋಳ, ಮಲಿಕಸಾಬ್ ಭಾಗವಾನ್, ಸಿದ್ದಪ್ಪ ಶೀಲವಂತ, ಮಾರುತಿ ಕೊಡನ್ನವರ, ಯಲ್ಲಪ್ಪ ಕೊಡನ್ನವರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ