ಜನರ ಮನೆ ಬಾಗಿಲಿಗೆ ಸರಕಾರದ ಯೋಜನೆ
ಡಿಸಿ ನಡೆ ಹಳ್ಳಿಕಡೆ ಕಾರ್ಯಕ್ರಮ
ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಹಳ್ಳಿಗಳ ಜನರ ಮನೆ ಬಾಗಿಲಿಗೆ ಸರಕಾರದ ಯೋಜನೆಗಳನ್ನು ತಲುಪಿಸುವ ಮಹತ್ವದ ಉದ್ದೇಶ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ್ದಾಗಿದೆ ಎಂದು ತಹಸೀಲ್ದಾರ್ ಬಿ.ಎಸ್.ಕಡಕಭಾವಿ ಹೇಳಿದರು.
ತಾಲೂಕಿನ ಮುದೂರ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲೂಕಾ ಕಛೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ರಾಜ್ಯಮಟ್ಟದಲ್ಲಿರುವ ಸಮಸ್ಯೆಗಳ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮೇಲಾಧಿಕಾರಿಗಳಿಗೆ ಕಳುಹಿಸುತ್ತೇವೆ. ಆಧಾರ, ರೇಷನ್ ಕಾರ್ಡ ಸೇರಿದಂತೆ ವಿವಿಧ ಇಲಾಖೆಗೆ ಸೇರಿದ 65 ಅರ್ಜಿಗಳು ಸ್ವೀಕಾರವಾಗಿದ್ದು ಅದರಲ್ಲಿ ಪಂಚಾಯತ್ ರಾಜ್ ಇಲಾಖೆಯದ್ದೇ ಹೆಚ್ಚು ಅರ್ಜಿಗಳು ಬಂದಿವೆ. ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ತಾಪಂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ತಾಪಂ ಇಓ ಎಸ್.ವಾಯ್.ಹೊಕ್ರಾಣಿ ಮಾತನಾಡಿದರು.ಕೃಷಿ ಇಲಾಖೆ ಸಹಾಯಕ ನಿದರ್ೇಶಕ ಎಸ್.ಡಿ.ಭಾವಿಕಟ್ಟಿ,ನೌಕರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟೀಮನಿ,ವಿಜಯಕುಮಾರ ರಾಠೋಡ,ಹೆಸ್ಕಾಂನ ಶಿವಪ್ಪ ಆರೇಶಂಕರ,ಪಿಡಿಓ ವಿಜಯಾ ಮುದಗಲ್,ಕಂದಾಯ ನಿರೀಕ್ಷಕ ಡಿ.ಎಸ್.ತಳವಾರ,ಗ್ರಾಮ ಲೆಕ್ಕಾಧಿಕಾರಿ ರಿಯಾಜ್ ನಾಯ್ಕೋಡಿ ಮೊದಲಾದವರು ಇದ್ದರು.