ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗಲಿವೆ : ಸಚಿವ ಸತೀಶ ಜಾರಕಿಹೊಳಿ
ಲೋಕದರ್ಶನ ವರದಿ
ಯರಗಟ್ಟಿ 27 : ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಈ ಯೋಜನೆಯಿಂದ ಯರಗಟ್ಟಿ ಭಾಗದ ಆಡಳಿತ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದ್ದು, ಸಾರ್ವಜನಿಕರಿಗೆ ವಿವಿಧ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗಲಿವೆ.
ವೇಗ, ಪಾರದರ್ಶಕತೆ ಹಾಗೂ ಜನಸ್ನೇಹಿ ಆಡಳಿತಕ್ಕೆ ಇದು ಸಹಕಾರಿಯಾಗಲಿದೆ. ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿ ನಿಗದಿತ ಸಮಯದಲ್ಲಿಯೇ ಪೂರ್ಣಗೊಳ್ಳಲಿದೆ ಎಂದರು.
ಯರಗಟ್ಟಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೇ ಹೊಸ ತಾಲ್ಲೂಕು ಪಂಚಾಯಿತಿಯಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವರು. ಆದಷ್ಟು ಬೇಗ ಅಧಿಕಾರಿಯನ್ನು ನೇಮಕ ಮಾಡಿಸಲಾಗುವುದು’ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದ ಪಟ್ಟಣದ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಆಡಳಿತ ಕಚೇರಿಯನ್ನು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು.
ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ‘ಹೊಸ ತಾಲ್ಲೂಕಿನ ಗಡಿ ಭಾಗದೂ ಜನರಿಗೆ ಸರ್ಕಾರದ ಸವಲತ್ತು ಗಳು ಆದಷ್ಟು ಬೇಗ ಸಿಗಲೆಂಬ ಉದ್ದೇಶ, ತಾಲ್ಲೂಕಿನ ಆಡಳಿತವನ್ನು ಸುಗಮವಾಗಿ ನಡೆಸಲು ಹಂತ ಹಂತವಾಗಿ ಕಚೇರಿಗಳನ್ನು ತೆರೆಯಲಾಗುತ್ತಿದೆ.
ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಅವಳಿ ತಾಲ್ಲೂಕುಗಳನ್ನು ಸಮಾನವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಉದ್ದೇಶ’ ಎಂದರು. ಇದೇ ವೇಳೆ 8.60 ಕೋಟಿ ವೆಚ್ಚದಲ್ಲಿ ಹೊಸ ವೆಚ್ಚದಲ್ಲಿ ಹೊಸ ಪ್ರಜಾ ಸೌಧ ಕಟ್ಟಡವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಯಿತು.