ರಾಷ್ಟ್ರೀಯ

ರೈತರ ಮಾತನ್ನು ಸರ್ಕಾರ ಆಲಿಸಬೇಕು- ರಾಹುಲ್ ಗಾಂಧಿ

ರೈತರ ಮಾತನ್ನು ಸರ್ಕಾರ ಆಲಿಸಬೇಕು- ರಾಹುಲ್ ಗಾಂಧಿ

ನವದೆಹಲಿ, ಡಿಸೆಂಬರ್ 26: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಚಳವಳಿಯನ್ನು ಹಳಿ ತಪ್ಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರ ಬೇಡಿಕೆಗಳನ್ನು ಆಲಿಸದ ಹೊರತು ರೈತರು ಮಣಿಯುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ರೈತರ ಚಳವಳಿಯ ಆಯ್ದ ಭಾಗಗಳನ್ನು ಟ್ವೀಟರ್‍ ನಲ್ಲಿ ಹಂಚಿಕೊಂಡಿರುವ ರಾಹುಲ್‍ಗಾಂಧಿ,  ಸರ್ಕಾರ ರೈತರ ಮಾತನ್ನು ಆಲಿಸಬೇಕು. ಬೇಡಿಕೆಗಳು ಈಡೇರದಿದ್ದರೆ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತರ ಚಳವಳಿ ಶನಿವಾರ 31 ನೇ ದಿನಕ್ಕೆ ಮುಟ್ಟಿದೆ. ತೀವ್ರ ಹವಾಮಾನ ಪರಿಸ್ಥಿತಿಗಳ ನಡುವೆಯೂ ರೈತರು ಪ್ರತಿಭಟನೆಯನ್ನು ಮುಂದುವರೆಸುವುದರ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ರೈತರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಯ ಕಡೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 9 ಮತ್ತು 24 ರ ಗಡಿಗಳನ್ನು ಸಹ ಮುಚ್ಚಲಾಗಿದೆ. .ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರು ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಗಡಿಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ಮುಖಂಡರು ಗುರುವಾರ ರಾಷ್ಟ್ರಪತಿಯವನ್ನು ಭೇಟಿಯಾಗಿ ಮೂರು ಹೊಸ ಕೃಷಿ ಸುಧಾರಣಾ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, 2 ಕೋಟಿ ರೈತರ ಸಹಿಯುಳ್ಳ ಮನವಿ ಪತ್ರವನ್ನು ನೀಡಿದ್ದಾರೆ.

 

ಸುದ್ದಿ ಓದಿ