ಗೃಹಲಕ್ಷ್ಮಿ ಯೋಜನೆಯ ಮೃತ ಫಲಾನುಭವಿಗಳ ರೂ.12.37 ಲಕ್ಷ ಸರ್ಕಾರಕ್ಕೆ ಮರು ಭರಣ : ಸತೀಶ್ ನಾಯ್ಕ್
Government to refund Rs. 12.37 lakh of deceased beneficiaries of Grihalakshmi scheme: Satish Naik
ಲೋಕದರ್ಶನ ವರದಿ
ಕಾರವಾರ. ಮೇ.15:- ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಿದ್ದ ರೂ. 12.37 ಲಕ್ಷ ಗಳನ್ನು ಸರ್ಕಾರಕ್ಕೆ ಮರು ಭರಣ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ ನಾಯ್ಕ್ ತಿಳಿಸಿದರು. ಅವರು ಶುಕ್ತವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯ ಮೃತ ಫಲಾನುಭವಿಗಳಿಗೆ ಜಮೆ ಆಗಿರುವ ಮೊತ್ತವನ್ನು ಈಗಾಗಲೇ ಸರ್ಕಾರಕೆ ಜಮೆ ಮಾಡಲಾಗಿದ್ದು, ಈ ಮೊತ್ತವು ಇನ್ನೂ ಹೆಚ್ಚಿರುವ ಸಾಧ್ಯತೆಗಳಿದೆ. ಆದ್ದರಿಂದ ಮೃತ ಫಲಾನುಭವಿಗಳ ಕುರಿತು ಮಾಹಿತಿ ದೊರೆತಲ್ಲಿ, ಗ್ಯಾರಂಟಿ ಸಮಿತಿಯ ಸದಸ್ಯರುಗಳು ತಮ್ಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಒದಗಿಸುವ ಮೂಲಕ ಮೃತರ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗುವುದನ್ನು ತಡೆಯಲು ಪ್ರಯತ್ನಿಸಬೇಕು ಎಂದರು.
ಗೃಹಲಕ್ಷ್ಮಿ ಯೋಜನೆಯ ಮೃತ ಫಲಾನುಭವಿಯ ಪಡಿತರ ಚೀಟಿಯಲ್ಲಿನ ಬೇರೆ ಕುಟುಂಬದ ಸದಸ್ಯರು ಹೊಸದಾಗಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮೃತ ಫಲಾನುಭವಿಗೆ ಜಮೆ ಆಗಿರುವ ಮೊತ್ತ ಸಂಪೂರ್ಣವಾಗಿ ಸರ್ಕಾರಕ್ಕೆ ಮರುಭರಣ ಗೊಂಡಿರುವುದನ್ನು ಪರೀಶೀಲಿಸಿ, ಹೊಸದಾಗಿ ಸೇರೆ್ಡಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಮತ್ತು ತಾಂತ್ರಿಕ ಕಾರಣಗಳಿಂದ ಯೋಜನೆಯ ಹಣ ಸಂದಾಯವಾಗದಿರುವ ಪ್ರಕರಣಗಳಲ್ಲಿರುವ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಸ್ಕಾಂ ನಿಂದ ಜಿಲ್ಲೆಯಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು, ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಿರುವ ಕಾರ್ಯಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಮತ್ತು ವಿದ್ಯುತ್ ತಂತಿಗಳ ಮೇಲಿರುವ ಮರದ ಕೊಂಬೆಗಳು ಮತ್ತು ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಮೂಲಕ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ತಿಳಿಸಿದರು.
ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಸ್ವ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತಹ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಿ ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವಂತೆ ಕೌಶಲ್ಯಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸದಾಗಿ ನೇಮಕಗೊಂಡಿರುವ ಚಾಲಕರಿಗೆ ಸುರಕ್ಷಿತ ಚಾಲನೆ ಕುರಿತಂತೆ ಇನ್ನೂ ಹೆಚ್ಚಿನ ತರಬೇತಿಯನ್ನು ನೀಡುವಂತೆ ತಿಳಿಸಿದ ಅವರು ನಿಗಧಿತ ನಿಲುಗಡೆ ಸ್ಥಳಗಳಲ್ಲಿ ಕಡ್ಡಾಯವಾಗಿ ಬಸ್ ನಿಲುಗಡೆ ಮಾಡುವ ಮೂಲಕ ಪ್ರಯಾಣಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಒದಗಿಸುತ್ತಿರುವ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯ ಕಚೇರಿಗಳಲ್ಲಿ ತಮ್ಮ ಗ್ಯಾರಂಟಿ ಯೋಜನೆಯ ಕುರಿತ ಫಲಕ/ಬ್ಯಾನರ್ ಗಳನ್ನು ತಪ್ಪದೇ ಅಳವಡಿಸುವ ಮೂಲಕ ಯೋಜನೆಯ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಇದುವರೆಗೆ, ಗೃಹಜ್ಯೋತಿ ಯೋಜನೆಯಡಿ ರೂ.582.92 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ರೂ.1828.28 ಕೋಟಿ, ಅನ್ನಭಾಗ್ಯ ಯೋಜನೆಯಡಿ ರೂ.152.51 ಕೋಟಿ, ಯುವನಧಿ ಯೋಜನೆಯಡಿ ರೂ.22 ಕೋಟಿ ಮತ್ತು ಶಕ್ತಿ ಯೋಜನೆಯಡಿ ರೂ.559.93 ಕೋಟಿಯ ನೆರವನ್ನು ಒದಗಿಸಲಾಗಿದ್ದು, ಗೃಹಲಕ್ಷಿ ಯೋಜನೆಯ ಮಾರ್ಚ್ ತಿಂಗಳ ಮೊತ್ತ ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೂ 3 ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನಾಗರಾಜ ಮುರ್ಡೆಶ್ವರ, ಜನಾರ್ಧನ ಕುಪ್ಪ ದೇವಾಡಿಗ, ಪುರುಷೋತ್ತಮ ದೇವಪ್ಪ ನಾಯ್ಕ, ಕಾರವಾರ ತಾಲೂಕು ಅಧ್ಯಕ್ಷ ರಾಜೇಂದ್ರ ರಾಣೆ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮ ನವರ್, ಪ್ರಾಧಿಕಾರದ ಸದಸ್ಯರಾದ ಪಾಂಡುರಂಗ ಕೆ ಗೌಡ, ರಿಯಾಜ್ ಅಹಮದ್ ಬಾಬುಸಾಬ್, ಸುಮಾ ರಾಜು ಉಗ್ರಾಣಕರ್, ರಾಜಶೇಖರ್ ರುದ್ರಗೌಡ ಹಿರೇಮಠ, ದೇವಿದಾಸ ನಾಗೇಶ ಶಾನುಭಾಗ, ಅಣ್ಣಪ್ಪ ಮಹಾಬಲೇಶ್ವರ ನಾಯ್ಕ, ರಾಜು ಮಂಜಪ್ಪ ನಾಯ್ಕ, ಅಶೋಕ ಕೃಷ್ಣಗೌಡ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಇದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 