ಮಾ.18 ರಂದು ಬಳ್ಳಾರಿಗೆ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಭೇಟಿ ’ನಶಾಮುಕ್ತ ಭಾರತ’ ಅಭಿಯಾನ ಉದ್ಘಾಟನೆ
Governor Thaawarchand Gehlot to visit Ballari on March 18 to inaugurate 'Drug-Free India' campaign
ಬಳ್ಳಾರಿ 17: ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಮಾರ್ಚ್ 18 ರಂದು ಬಳ್ಳಾರಿ ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡಿದ್ದಾರೆ. ಮಾ.18 ರಂದು ಬೆಳಿಗ್ಗೆ ಬೆಂಗಳೂರಿನ ಲೋಕ ಭವನದಿಂದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬಳ್ಳಾರಿಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 07.30 ಗಂಟೆಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ ಸಿ) ಮೈದಾನದಲ್ಲಿ ಹಮ್ಮಿಕೊಂಡಿರುವ ’ನಶಾಮುಕ್ತ ಭಾರತ-ಯುವ ಶುದ್ಧಿ ಅಭಿಯಾನ’ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು. ಬಳಿಕ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮರಳಿ ಬೆಂಗಳೂರಿಗೆ ಪ್ರಯಾಣಿಸುವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 