ಬಳ್ಳಾರಿ

ಬಳ್ಳಾರಿಯ ಕನಕ ದುರ್ಗಾ ದೇವಸ್ಥಾನದಲ್ಲಿ ರಾಜ್ಯಪಾಲರ ವಿಶೇಷ ಪೂಜೆ

ಬಳ್ಳಾರಿಯ ಕನಕ ದುರ್ಗಾ ದೇವಸ್ಥಾನದಲ್ಲಿ ರಾಜ್ಯಪಾಲರ ವಿಶೇಷ ಪೂಜೆ

ಲೋಕದರ್ಶನ ವರದಿ 

            ಬಳ್ಳಾರಿ 16: ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು, ಸೋಮವಾರ ಬಳ್ಳಾರಿ ನಗರದ ಆದಿ ದೇವತೆ ಕನಕ ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿ ಕನಕ ದುರ್ಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಅತ್ಯಂತ ಭಕ್ತಿಭಾವದಿಂದ ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ರಾಜ್ಯದ ಸಮೃದ್ಧಿಗಾಗಿ ಪ್ರಾರ್ಥಿಸಿ ಆಶೀರ್ವಾದ ಪಡೆದರು. 

ದೇವಸ್ಥಾನಕ್ಕೆ ಆಗಮಿಸಿದ ರಾಜ್ಯಪಾಲರನ್ನು ದೇವಸ್ಥಾನದ ಅರ್ಚಕರು ಹಾಗೂ ಆಡಳಿತ ಮಂಡಳಿಯವರು ಆತ್ಮೀಯವಾಗಿ ಸ್ವಾಗತಿಸಿದರು. 

ನಂತರ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. 


ಸುದ್ದಿ ಓದಿ