ಜಾತಿ ಪ್ರಮಾಣ ಪತ್ರಗಳ ವಿತರಣೆಗೆ ಗೋವಿಂದ ಕಾaರಜೋಳ ಸೂಚನೆ
ಬೆಂಗಳೂರು, ಏ.24,ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಜಾತಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡದಿರುವ ಬಗ್ಗೆ ದೂರುಗಳು ಬಂದಿದ್ದು, ಅರ್ಹ ಫಲಾನುಭವಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ. ಆರೋಗ್ಯ ತಪಾಸಣೆ, ಶಸ್ತ್ರಚಿಕಿತ್ಸೆ ಗೊಳಪಡುವ ಫಲಾನುಭವಿಗಳು, ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಜಾತಿ ಪ್ರಮಾಣ ಪತ್ರದ ಕೊರತೆಯಿಂದ ತೊಂದರೆಗೊಳಗಾಗಿದ್ದಾರೆ. ಅರ್ಹ ಆಕಾಂಕ್ಷಿ ಫಲಾನುಭವಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ರಾಜ್ಯದ ಎಲ್ಲಾ ತಹಶಿಲ್ದಾರರಿಗೆ ನಿರ್ದೇಶಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಅವರಿಗೆ ಕಾರಜೋಳ ಸೂಚಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 