ಇಂಡಿ

ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಉಪಹಾರ ಸ್ಥಗಿತ: ರೋಗಿಗಳ ಪರದಾಟ

ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಉಪಹಾರ ಸ್ಥಗಿತ: ರೋಗಿಗಳ ಪರದಾಟ

ಇಂಡಿ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಾಗೂ ಬಾಣಂತಿಯರಿಗೆ ನೀಡಬೇಕಾದ ಉಪಹಾರ ಮತ್ತು ಊಟವನ್ನು ಸ್ಥಗಿತಗೊಳಿಸಿದ್ದರಿಂದ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ಸರ್ಕಾರದಿಂದ ಬಾಣಂತಿಯರಿಗಾಗಿ ಹಾಗೂ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗಾಗಿ ಸರ್ಕಾರದಿಂದ ಪ್ರತಿದಿನ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. 

ಆದರೆ ಕಳೆದ ಒಂದು ತಿಂಗಳಿನಿಂದ ಈ ಊಟ ಮತ್ತು ಉಪಹಾರವನ್ನು ಸ್ಥಗಿತಗೊಳಿಸಿದ್ದಾರೆ ಮುಖ್ಯ ವೈದ್ಯಾಧಿಕಾರಿಗಳನ್ನು ಕೇಳಿದರೆ ಟೆಂಡರ್ ಮುಗಿದು ಹೋಗಿದೆ ಇದು ರಾಜ್ಯಮಟ್ಟದ ಟೆಂಡರ್ ಆಗಿದ್ದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೂ ಸಹ ಮಾಹಿತಿ ಇದೆ ಡಿಸೆಂಬರ್ ನಲ್ಲಿ ಮತ್ತೆ ಊಟ ಹಾಗೂ ಉಪಹಾರವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. 

ಹೀಗಾಗಿ ರೋಗಿಗಳು ಮತ್ತು ಬಾಣಂತಿಯರ ಸಂಬಂಧಿಕರು ತಮ್ಮ ಮನೆಗಳಿಂದಲೇ ಆಸ್ಪತ್ರೆಗೆ ಊಟವನ್ನು ಡಬ್ಬಿಯಲ್ಲಿ ಕಟ್ಟಿಕೊಂಡು ಬಂದು ಊಟ ನೀಡಬೇಕಾಗಿದೆ. 

ಅಲ್ಲದೆ ಟೆಂಡರ್ ಇದ್ದ ಸಂದರ್ಭದಲ್ಲಿಯೂ ಸಹ ಬಾಣಂತಿಯರಿಗೆ ಮತ್ತು ದಾಖಲಾದ ರೋಗಿಗಳಿಗೆ ಊಟ ಮತ್ತು ಉಪಹಾರವನ್ನು ನೀಡೇ ಇಲ್ಲ ಎಂದು ಹಲವು ರೋಗಿಗಳು ಆರೋಪಿಸಿದ್ದಾರೆ... 

ಇತ್ತೀಚೆಗಷ್ಟೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಸರಿಪಡಿಸಿಕೊಳ್ಳಲು ವೈದ್ಯರಿಗೆ ಸೂಚಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಹಾಗೂ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಹ ಇಲ್ಲ ಈಗ ಊಟ ಮತ್ತು ಉಪಹಾರವನ್ನು ಸಹ ಸ್ಥಗಿತಗೊಳಿಸಲಾಗಿದೆ ಹೀಗಾಗಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಸರಿ ಇಲ್ಲ ಎಂದು ಬಡ ಜನರು ಸಹ ಖಾಸಗಿ ಆಸ್ಪತ್ರೆಗಳ ಮುಖ ಮಾಡಬೇಕಾದ ಪ್ರಸಂಗ ಎದುರಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಆಸ್ಪತ್ರಿಯ ವ್ಯವಸ್ಥೆಯನ್ನು ಸರಿಪಡಿಸಿ ಸರ್ಕಾರದಿಂದ ರೋಗಿಗಳು ಹಾಗೂ ಬಾಣಂತಿಯರಿಗೆ ಸಿಗಬೇಕಾದ ಸವಲತ್ತುಗಳನ್ನು ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. 




ಸುದ್ದಿ ಓದಿ