ಶಾಲೆ ಪುನರಾರಂಭ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಸ್ವಾಗತಿದ : ಗ್ರಾ ಪಂ ಅಧ್ಯಕ್ಷರು
Gram Panchayat President welcomes students with flowers upon resumption of school
ಇಂಡಿ 29: ತಾಲ್ಲೂಕಿನ ತಡವಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವೇಶ್ವರ ವಸತಿ ತಡವಲಗಾ ಶಾಲೆಯ ವಿದ್ಯಾರ್ಥಿಗಳಿಗೆ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ವಾಲಿಕಾರ ಅವರು ಎರಡು ತಿಂಗಳು ಬೇಸಿಗೆ ರಜೆಯಲ್ಲಿದ್ದ ವಿದ್ಯಾರ್ಥಿಗಳು ಮೇ 29. 06.2025 ರಂದು ಮತ್ತೆ ಶಾಲೆಗೆ ಮರಳಲಿದ್ದ ವಿದ್ಯಾರ್ಥಿಗಳಿಗೆ ಪುಷ್ಪ ಗುಚ್ಛ ನೀಡಿ ಆತ್ಮಿಯವಾಗಿ ಸ್ವಾಗತಿಸಿದರು.
ನಂತರ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ವಾಲಿಕಾರ ಅವರು ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು, ಮಕ್ಕಳಿಗೆ ಆಟದೊಂದಿಗೆ ಶಿಕ್ಷಣ ನೀಡಬೇಕು ಪ್ರಸ್ತುತ ವರ್ಷದಲ್ಲಿ ಶಾಲೆಯ ಆಟದ ಮೈದಾನ, ಕೌಂಪೌಂಡ ಹಾಗೂ ಇತರೆ ಮೂಲ ಸೌಲಭ್ಯ ಅಬಿವೃದ್ದಿಗಾಗಿ ಸುಮಾರು ಹತ್ತು ಲಕ್ಷ ರೂಪಾಯಿ ಅನುದಾನವನ್ನು ನರೇಗಾ ಯೋಜನೆಯ ಅಡಿಯಲ್ಲಿ ಇಡಲಾಗುವುದು ಎಂದು ಹೇಳಿದರು, ಹೊಸ ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ವಿದ್ಯಾರ್ಥಿಗಳ ಸ್ವಾಗತಕ್ಕೆ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಮುಖ್ಯ ಗುರುಗಳು ಮತ್ತು ಶಾಲೆ ಶಿಕ್ಷಕರು ಅಗತ್ಯ ಸಿದ್ಧತೆ ಕೈಗೊಂಡಿದ್ದರು.
ವಿದ್ಯಾರ್ಥಿಗಳು ಮರಳುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡವನ ಸಿಂಗರಿಸಲಾಗಿತ್ತು. ಈ ದಿನ ಶಾಲೆಗೆ ಬರುವ ಮಕ್ಕಳಿಗೆ ಸಿಹಿ ತಿನಿಸು ಮಾಡಲಾಯಿತು. ಮೊದಲ ದಿನವೇ ಮಕ್ಕಳಿಗೆ ಹಾಗೂ ಸಮವಸ್ತ್ರ ವಿತರಣೆ ಕೂಡ ಮಾಡಲಾಯಿತು. ಈ ಸಂದರ್ಭದಲ್ಲಿ ತಡವಲಗಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಡೊಳ್ಳಿ,ಶಾಲೆಯ ಮುಖ್ಯ ಗುರುಮಾತೆ ಚನ್ನಮ್ಮ ಝಳಕಿ, ಎಸ ಡಿ ಎಂ ಸಿ ಅಧ್ಯಕ್ಷರಾದ ಶೋಭಾ ಮೇತ್ರಿ, ಉಪಾಧ್ಯಕ್ಷರಾದ ರಮೇಶ ಸಿಂದಗೇರಿ, ಗಂಗಾಬಾಯಿ ಐನಾಪೂರ, ಶಿಕ್ಷಕರಾದ ಎಸ್ ಕೆ ಲಾಳಸಂಗಿ, ಎಸ್ ಸಿ ಗೀಡಘಂಟಿ, ಎನ್ ಜಿ ರೋಳ್ಳಿ, ಎಸ್ ಬಿ ಅಂಗಡಿ,ಶ್ರೀಮತಿ ಜಿ ಪಿ ಕಾಳಗಿ,ಬಿ ಬಿ ಝಳಕಿ,ಹಳೆಯ ವಿದ್ಯಾರ್ಥಿಗಳು, ಊರಿನ ಗಣ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಸಿಬ್ಬಂದಿ ವರ್ಗ ಪ್ರಾರಂಭೋತ್ಸವದಲ್ಲಿ ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 