ಗ್ರಾಪಂ ಚುನಾವಣೆ:ಅಂತಿಮ ಮತದಾರರ ಪಟ್ಟಿ ಪ್ರಕಟ
ಬಳ್ಳಾರಿ,ಸೆ.01: 2020ನೇ ಸಾಲಿನ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಎಲ್ಲಾ ತಹಶೀಲ್ದಾರರು ಆ.31ರಂದು ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್(ಚುನಾವಣೆ ನಡೆಸುವ) ನಿಯಮUಳು,1993ರ ನಿಯಮ 5(3)ರ ಪ್ರಕಾರ ಪ್ರತಿಯೊಂದು ಕ್ಷೇತ್ರದ ಮತಗಟ್ಟೆಗಳಲ್ಲಿ ಗ್ರಾಮಪಂಚಾಯತಿ, ತಾಪಂ ಹಾಗೂ ತಾಲೂಕು ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.