ವೈಭವದಿಂದ ಗಣಪತಿ ವಿಸರ್ಜನಾ ಮೆರವಣಿಗೆ
Grand Ganpati immersion procession
ಲಕ್ಷ್ಮೇಶ್ವರ, ಸೆ. 26: ತಾಲೂಕಿನ ಅಡರಕಟ್ಟಿ ಗ್ರಾಮದ ಶ್ರೀ ಕರಿಯಮ್ಮ ಯುವಕ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಗುರುವಾರ ರಾತ್ರಿ ವೈಭವದಿಂದ ನಡೆಯಿತು.
ವಿಸರ್ಜನಾ ಮೆರವಣಿಗೆಯಲ್ಲಿ ನಂದಿಕೋಲು ಸೇರಿದಂತೆ ವಿವಿಧ ವಾದ್ಯಗಳ ವೈಭವದೊಂದಿಗೆ ಎತ್ತುಗಳನ್ನು ಸಿಂಗರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸಡಗರ-ಸಂಭ್ರಮದಿಂದ ನೆರವೇರಿಸಲಾಯಿತು.
ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶ್ರೀ ಕರಿಯಮ್ಮ ಯುವಕ ಮಂಡಳಿಯ ಮುಖಂಡರು, ಅಡರಕಟ್ಟಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ನಿಂಗಪ್ಪ ಪಾಟೀಲ, ಮಾಂತೇಶ ಅಂಗಡಿ, ಮಾಂತೇಶ ಹವಳದ, ಚನ್ನಬಸಪ್ಪ ಅಬನೂರು, ಕುಬೇರ್ಪ ಹವಳದ,
ಮಾಂತೇಶ ಹವಳದ, ಲಕ್ಷ್ಮಣ ಮರಾಠಿ, ಅಶೋಕ ರೊಳ್ಳಿ, ಮಂಜುನಾಥ ಮೆಣಸಿನಕಾಯಿ, ನಾರಾಯಣ ಮರಾಠಿ, ಮಲ್ಲಿಕಾರ್ಜುನ ಮರಾಠಿ, ಸಂತೋಷ ಹಡಪದ, ಶರಣಪ್ಪ ಹಡಪದ ಸೇರಿದಂತೆ ಗ್ರಾಮದ ಗುರು-ಹಿರಿಯರು, ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 