ನ. 1 ರಂದು ಬೆಟಗೇರಿಯಲ್ಲಿ ಅದ್ಧೂರಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಲೋಕದರ್ಶನ ವರದಿ
ಬೆಟಗೇರಿ 29 : ಬೆಟಗೇರಿ ರಾಜ್ಯೋತ್ಸವ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆ ಹಾಗೂ ಸಾರ್ವಜನಿಕರ ಸಂಯುಕ್ತ ಆಶ್ರಯದಲ್ಲಿ ಬೆಟಗೇರಿಯಲ್ಲಿ ನ. 1 ರಂದು ಶುಕ್ರವಾರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಮುಂಜಾನೆ 8.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಮಾಜಿ ಸಚಿವರಾದ ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಡಿ.ಡಿ.ಪಿ.ಐ. ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಬೆಟಗೇರಿಯ ಎಲ್ಲ ನಗರಸಭಾ ಸದಸ್ಯರು ಆಗಮಿಸಲಿರುವರು.
ಬೆಟಗೇರಿಯ ಎಲ್ಲ ಶಾಲಾ ಕಾಲೇಜುಗಳ ರೂಪಕಗಳೊಂದಿಗೆ ಶಿಕ್ಷಕ ಶಿಕ್ಷಕಿಯರು, ಸಿಬ್ಬಂದಿಯವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಮವಸ್ತ್ರದಲ್ಲಿ ವೇಳೆಗೆ ಸರಿಯಾಗಿ ಪಾಲ್ಗೊಳ್ಳಬೇಕೆಂದು ಹಾಗೂ ಸಮಸ್ತ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಟಗೇರಿ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ವಿನಂತಿಸಿದ್ದಾರೆ.