ಹಾವೇರಿ

ನ.1 ರಂದು ವಿಜೃಂಭಣೆ ಹಾಗೂ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ

ನ.1 ರಂದು ವಿಜೃಂಭಣೆ ಹಾಗೂ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ

ಲೋಕದರ್ಶನ ವರದಿ 


           ಹಾವೇರಿ:ಅ.17:  ಜಿಲ್ಲಾಡಳಿತದಿಂದ ನವೆಂಬರ್ 1 ರಂದು ವಿಜೃಂಭಣೆ ಹಾಗೂ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 7-45ಕ್ಕೆ ನಗರದ ಮೈಲಾರ ಮಹದೇವಪ್ಪ ವೃತ್ತದಿಂದ  ಹೊರಡುವ ಭುವನೇಶ್ವರಿ ಭಾವಚಿತ್ರ ಮೆರವಣಿಗೆಗೆ  ಅಗತ್ಯ ಜನಪದ ಕಲಾ ತಂಡಗಳನ್ನು ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. 

ಯಾವುದೇ ಲೋಪವಾಗದಂತೆ ಧ್ವಜಾರೋಹಣ, ಕ್ರೀಡಾಂಗಣ ಸ್ವಚ್ಛತೆ, ವೇದಿಕೆ ಅಲಂಕಾರ, ಆಸನ ವ್ಯವಸ್ಥೆ, ಸಾಧಕರಿಗೆ ಸನ್ಮಾನ, ಪಥಸಂಚಲನ,    ಕುಡಿಯುವ ನೀರು, ಧ್ವನಿವರ್ಧಕ ಸೇರಿದಂತೆ ಅಗತ್ಯ ಸಿದ್ಧತೆಕೈಗೊಳ್ಳಬೇಕು ಎಂದು  ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಕೆ.ಎಸ್‌.ಆರ್‌.ಟಿ.ಸಿ., ಅರಣ್ಯ ಇಲಾಖೆ,  ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸರ್ಕಾರ ಯೋಜನೆಗಳ ಮಾಹಿತಿ ಕುರಿತು ಸ್ಥಬ್ದಚಿತ್ರಗಳನ್ನು ಮಾಡಬೇಕು. ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸೂಚನೆ ನೀಡಿದರು. 

ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಎಲ್ಲ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಬೇಕು ಹಾಗೂ ನಗರದ ಎಲ್ಲ ವೃತ್ತಗಳಿಗೆ ದೀಪಾಲಂಕಾರ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು.  

ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಎಲ್ ಅವರು ಮಾತನಾಡಿ, ವಿವಿಧ ಇಲಾಖೆ ಅಧಿಕಾರಿಗಳ ವಹಿಸಿದ ಕೆಲಸವನ್ನು  ಅಚ್ಚುಕಟ್ಟಾಗಿ ಮಾಡಬೇಕು ಎಂದು ಸೂಚನೆ ನೀಡಿದರು.  

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಕೃಷಿ ಜಂಟಿ ನಿರ್ದೇಶಕ ಮಲ್ಲಿಕಾರ್ಜು, ಜಿ.ಪಂ. ಯೋಜನಾ ನಿರ್ದೇಶಕಿ ಶ್ರೀಮತಿ ರೇಖಾ ಡೊಳ್ಳಿನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶ ಡಿ.ಜೆ.ಮಂಜುನಾಥ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಲತಾ, ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ, ಪೊಲೀಸ್ ಇಲಾಖೆ ಅಧಿಕಾರಿಗಳು  ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಉಪಸ್ಥಿತರಿದ್ದರು. 


ಸುದ್ದಿ ಓದಿ