ಹೊನ್ನಳ್ಳಿ ತಾಂಡಾದಲ್ಲಿ ಗುರು ಅಜ್ಜಯ್ಯನವರ 20ನೇ ವರ್ಷದ ವೈಭವದ ಆಚರಣೆ
Grand celebration of Guru Ajjayya's 20th anniversary at Honnalli Tanda
ಬಳ್ಳಾರಿ 18 : ತಾಲ್ಲೂಕಿನ ಹೊನ್ನಳ್ಳಿ ತಾಂಡಾದಲ್ಲಿ ಗುರು ಅಜ್ಜಯ್ಯ ಹಾಗೂ ಹೇಮಜ್ಜಯ್ಯ ಸೇವಾ ಸಮಿತಿ ವತಿಯಿಂದ ಗುರು ಅಜ್ಜಯ್ಯನವರ 20ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಗಸ್ಟ್ 24ರಂದು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ವಕೀಲ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆಗಸ್ಟ್ 24ರಂದು ಸಂಜೆ 4 ಗಂಟೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದ್ದು, ರುದ್ರಾಭಿಷೇಕ, ಗಂಗಾ ಪೂಜೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಕೋಲಾಟ ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳು ನಡೆಯಲಿವೆ.
ಗುರು ಅಜ್ಜಯ್ಯ ಹಾಗೂ ಹೇಮಜ್ಜಯ್ಯನವರ ಸನ್ನಿಧಿಗೆ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜೀವನದಲ್ಲಿ ನೆಮ್ಮದಿ, ಸಂತೋಷ ಹಾಗೂ ಶಾಂತಿಗಾಗಿ ಪ್ರಾರ್ಥಿಸುವವರು, ವಿವಿಧ ಸಂಕಷ್ಟಗಳಿಂದ ಪರಿಹಾರ ಬಯಸುವವರು ಹಾಗೂ ಸಂತಾನ ಭಾಗ್ಯಕ್ಕಾಗಿ ಪ್ರಾರ್ಥಿಸುವ ದಂಪತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸನ್ನಿಧಿಗೆ ಆಗಮಿಸುತ್ತಿದ್ದಾರೆ. ಗುರುಗಳ ಮೇಲೆ ನಂಬಿಕೆ ಇಟ್ಟು ಪ್ರಾರ್ಥಿಸಿದ ಬಳಿಕ ತಮ್ಮ ಜೀವನದಲ್ಲಿ ಉತ್ತಮ ಬದಲಾವಣೆಗಳಾಗಿವೆ ಎಂದು ಅನೇಕ ಭಕ್ತರು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 