ಶಿಗ್ಲಿಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
Grand celebration of Sri Krishna Janmashtami in Shigli
ಶಿಗ್ಲಿ 04 : ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪುರಸ್ಕೃತ ಹಾಗೂ ಧಾರ್ಮಿಕ ಮುಖಂಡ ವೀರಣ್ಣ ಪವಾಡದ ಅವರ ಮನೆಯಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮನೆಯ ಮುದ್ದು ಮಕ್ಕಳಿಗೆ ಶ್ರೀಕೃಷ್ಣನ ವೇಷಭೂಷಣ ತೊಡಿಸಿ, ಬಾಲಕೃಷ್ಣನ ರೂಪದಲ್ಲಿ ಅಲಂಕರಿಸಿ ಹಬ್ಬವನ್ನು ಆಚರಿಸಲಾಯಿತು.
ಈ ವೇಳೆ ಮಾತನಾಡಿದ ವೀರಣ್ಣ ಪವಾಡದ ಅವರು, ಶ್ರೀಕೃಷ್ಣ ಜನ್ಮಾಷ್ಟಮಿಯು ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಮಹಾವಿಷ್ಣುವಿನ ಎಂಟನೇ ಅವತಾರವಾದ ಶ್ರೀಕೃಷ್ಣನು ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ರೋಹಿಣಿ ನಕ್ಷತ್ರದಲ್ಲಿ ಜನಿಸಿದನೆಂಬ ನಂಬಿಕೆಯಿದೆ. ಈ ದಿನವನ್ನು ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿಯಾಗಿ ಭಕ್ತಿಭಾವದಿಂದ ಆಚರಿಸಲಾಗುತ್ತದೆ ಎಂದರು.
ಜನ್ಮಾಷ್ಟಮಿಯಂದು ಭಕ್ತರು ಉಪವಾಸ ವ್ರತ ಕೈಗೊಂಡು, ಮನೆಗಳನ್ನು ಹೂವು ಹಾಗೂ ರಂಗೋಲಿಗಳಿಂದ ಅಲಂಕರಿಸುತ್ತಾರೆ. ಬಾಲಕೃಷ್ಣನ ಹೆಜ್ಜೆಗಳನ್ನು ಮನೆಯ ಹೊಸ್ತಿಲಿನಿಂದ ಪೂಜಾ ಕೋಣೆಯವರೆಗೆ ಬಿಡಿಸಿ ಪೂಜಿಸಲಾಗುತ್ತದೆ. ಮಧ್ಯರಾತ್ರಿ ಕೃಷ್ಣನ ಜನ್ಮ ಸಮಯದಲ್ಲಿ ವಿಶೇಷ ಪೂಜೆ, ಭಜನೆ ಹಾಗೂ ಆರತಿ ನೆರವೇರಿಸಲಾಗುತ್ತದೆ. ಬೆಣ್ಣೆ, ಮೊಸರು, ಅವಲಕ್ಕಿ ಸೇರಿದಂತೆ ವಿವಿಧ ಸಿಹಿ ತಿಂಡಿಗಳನ್ನು ನೈವೇದ್ಯವಾಗಿ ಅರ್ಿಸಲಾಗುತ್ತದೆ ಎಂದು ಹೇಳಿದರು.
ಜಗತ್ತಿಗೆ ಭಗವದ್ಗೀತೆಯ ಜ್ಞಾನವನ್ನು ಸಾರಿದ, ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ರಕ್ಷಿಸಿದ ಜಗದೋದ್ಧಾರಕ ಶ್ರೀಕೃಷ್ಣನು ಎಲ್ಲರಿಗೂ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ. ಲೀಲಾಮಾನುಷ ವಿಗ್ರಹ ಬಾಲಕೃಷ್ಣನ ಕೃಪೆ ಸದಾ ಎಲ್ಲರ ಮೇಲಿರಲಿ. ಜೀವನದ ಎಲ್ಲ ಕಷ್ಟಗಳು ದೂರವಾಗಿ ಸಂತೋಷ ನೆಲೆಸಲಿ ಎಂದು ಅವರು ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 