ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆಗೆ ಅದ್ದೂರಿ ಸಿದ್ಧತೆ
Grand preparations for D. Devaraj Urs's 111th birth anniversary celebrations
ಲೋಕದರ್ಶನ ವರದಿ
ಗದಗ, ಆ.14: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ನಗರದ ಕನಕ ಭವನದಲ್ಲಿ ಆಗಸ್ಟ್ 20ರಂದು ಆಚರಿಸಲು ಸಿದ್ಧತೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಸಂಭ್ರಮ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ ಕೈಗೊಳ್ಳಬೇಕು. ಕಾರ್ಯಕ್ರಮ ನಡೆಯುವ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಜೊತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.
ಡಿ. ದೇವರಾಜ ಅರಸು ಅವರ ಜೀವನ, ಆಡಳಿತ ಹಾಗೂ ಸಾಮಾಜಿಕ ಕೊಡುಗೆಗಳ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು. ಒಟ್ಟಾರೆಯಾಗಿ ಜನ್ಮದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ನಡೆಯುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ ಮಾತನಾಡಿ, ಜನ್ಮದಿನಾಚರಣೆಯಂದು ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೆ, ಜನ್ಮದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಡಿ. ದೇವರಾಜ ಅರಸು ಅವರ ಭಾವಚಿತ್ರವಿರುವ ಮೆರವಣಿಗೆ ನಗರದ ಚೆನ್ನಮ್ಮ ವೃತ್ತದಿಂದ ಆರಂಭವಾಗಿ ಕಾರ್ಯಕ್ರಮದ ಸ್ಥಳವಾದ ಕನಕ ಭವನಕ್ಕೆ ತಲುಪಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್ಪಿ ಮಹಾಂತೇಶ ಸಜ್ಜನರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 