ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆ
Grand procession of the Durga Devi idol
ತಾಳಿಕೋಟಿ 21 : ಪಟ್ಟಣದ ಮಾದರ ಚೆನ್ನಯ್ಯ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾಮಾತೆಯ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಭವ್ಯ ಮೆರವಣಿಗೆ ಜರುಗಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9-00 ಘಂಟೆಗೆ ಪಟ್ಟಣದ ಅಂಬಾಭವಾನಿ ದೇವಸ್ಥಾನದಿಂದ ಸಕಲ ವಾದ್ಯ ಮೇಳಗಳೊಂದಿಗೆ ಆರಂಭವಾದ ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆಯು ಕತ್ರಿ ಬಜಾರ್, ಪಂಚ ಶಹೀದ ದರ್ಗಾ,ಭೋವಿ ಸಮಾಜದ ಪಿಲೇಕಮ್ಮ ದೇವಸ್ಥಾನ ಮಾರ್ಗವಾಗಿ ಮಾದರ ಚೆನ್ನಯ್ಯ ಬಡಾವಣೆಗೆ ತಲುಪಿ ದೇವಸ್ಥಾನಕ್ಕೆ ಪ್ರವೇಶಿಸಿತು.
ನಂತರ ಸಕಲ ಭಕ್ತಾದಿಗಳಿಗೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೆರವಣಿಗೆಯಲ್ಲಿ ತಾಳಿಕೋಟಿ ಪುರಸಭೆ ಮಾಜಿ ಸದಸ್ಯರಾದ ಪ್ರಭುಗೌಡ ಮದರಕಲ್ಲ, ಜೈಸಿಂಗ್ ಮೂಲಿಮನಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬ ಕೆಂಭಾವಿ, ಸಮಾಜದ ಪ್ರಮುಖರಾದ ಬಸ್ಸು ಮಾದರ, ರಾಮಣ್ಣ ಕಟ್ಟಿಮನಿ, ಗೋಪಾಲ ಕಟ್ಟಿಮನಿ, ಬಸ್ಸಪ್ಪ ಮಾದರ ಹಾಗೂ ಶ್ರೀ ಮಾದರ ಚೆನ್ನಯ್ಯ ಸಮಾಜದ ಬಾಂಧವರು ಅಪಾರ ಸಂಖ್ಯೆಯಲ್ಲಿ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 