ಅದ್ದೂರಿಯಾಗಿ ನಡೆದ ದ್ಯಾಮಮ್ಮ ಹಾಗೂ ದುರ್ಗಮ್ಮ ಜಾತ್ರಾ ಮಹೋತ್ಸವ
Grandly celebrated Dyamamma and Durgamma Jatra Mahotsava
ಗದಗ 26 : 18 ವರ್ಷಗಳ ನಂತರ ಗದಗಿನ ಗ್ರಾಮದೇವತೆಗಳಾದ ದ್ಯಾವಮ್ಮ ಹಾಗೂ ದುರ್ಗಮ್ಮ ದೇವಿಯರ ಹರಿ ಜಾತ್ರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಬಂಡಾರದ ಜಾತ್ರೆ ಅದ್ದೂರಿಯಾಗಿ ನಡೆಯಿತು. ಒಕ್ಕಲಗೇರಿಯ ದ್ಯಾವಮ್ಮನ ಕಟ್ಟಿಯಿಂದ ಆರಂಭಗೊಂಡ ದೇವರ ಪಲ್ಲಕ್ಕಿಗಳು ಗಂಜಿ ಬಸವೇಶ್ವರ ಸರ್ಕಲ್, ರಾಚೋಟೇಶ್ವರ ಗುಡಿ, ಗ್ಯಾಟ್, ಹನುಮಂತನಗರಡಿ, ಮಹಾಸುಬಾಣಿ ಕಟ್ಟೆ, ನಾಲ್ವಾಡ ಗಲ್ಲಿ, ತಿಲಕ ಪಾರ್ಕ್ ರಸ್ತೆ ಹಾಗೂ ಜೋಡ ಮಾರುತಿ ದೇವಸ್ಥಾನದ ಎದುರಿನ ದುರ್ಗಾದೇವಿ ದೇವಸ್ಥಾನದವರೆಗೆ ಅದ್ದೂರಿ ಮೆರವಣಿಗೆಯಲ್ಲಿ ಸಾಗಿದವು. ಮೆರವಣಿಗೆಯುದ್ದಕ್ಕೂ ಭಕ್ತರು ಬಂಡಾರ ಎರಚಿ ದೇವರಿಗೆ ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು. ರಸ್ತೆಗಳಲ್ಲಿ ಭಕ್ತರ ಸಂಭ್ರಮ ಕಳೆಗಟ್ಟಿದ್ದು, ಜಾತ್ರೆಯ ಮೆರುಗು ಮತ್ತಷ್ಟು ಹೆಚ್ಚಿಸಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 