ಖಾಸಗಿ ಐಟಿಐಗಳಿಗೆ ಅನುದಾನ ನೀಡಲಿ
Grants should be provided to private ITIs
ತಾಳಿಕೋಟೆ 20: ಖಾಸಗಿ ಅನುದಾನರಹಿತ ಐಟಿಐ ಸಂಸ್ಥೆಗಳಿಗೆ ಸರ್ಕಾರ ವೇತನ ಸಹಾಯಾನುದಾನ ನೀಡಬೇಕು ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಂ.ಎಸ್. ಸರಶೆಟ್ಟಿ ಒತ್ತಾಯಿಸಿದರು. ಪಟ್ಟಣದ ಬಿಬಿಆರ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-26ನೇ ಸಾಲಿನ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಹಾಗೂ ಎನ್ಟಿಸಿ ಪ್ರಮಾಣಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಐಟಿಐ ವಿದ್ಯಾರ್ಥಿಗಳು ಕೇವಲ ಪ್ರಮಾಣಪತ್ರಕ್ಕೆ ಸೀಮಿತರಾಗದೆ ನಿಯಮಿತ ತರಗತಿಗಳಿಗೆ ಹಾಜರಾಗಿ ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಳ್ಳಬೇಕು. ಇದರಿಂದ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಉತ್ತಮ ಉದ್ಯೋಗಾವಕಾಶ ಪಡೆಯಲು ಸಾಧ್ಯ ಎಂದರು.
ಐಟಿಐಗಳಲ್ಲಿ ತರಬೇತಿ ನೀಡಲು ಇಂಜಿನಿಯರ್ಗಳ ಅಗತ್ಯವಿದ್ದು, ಅವರಿಗೆ ಹೆಚ್ಚಿನ ವೇತನದ ಉದ್ಯೋಗಾವಕಾಶಗಳಿರುವುದರಿಂದ ಖಾಸಗಿ ಸಂಸ್ಥೆಗಳಲ್ಲಿ ಅವರನ್ನು ಉಳಿಸಿಕೊಳ್ಳುವುದು ಕಷ್ಟವಾಗಿದೆ. ರೈತರು ಹಾಗೂ ಬಡ ವರ್ಗದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಐಟಿಐಗೆ ಸೇರುವುದರಿಂದ ಸರ್ಕಾರ ನಿಗದಿಪಡಿಸಿದ ಶುಲ್ಕವನ್ನೂ ಸಂಪೂರ್ಣವಾಗಿ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಖಾಸಗಿ ಐಟಿಐಗಳಿಗೆ ವೇತನ ಸಹಾಯಾನುದಾನ ನೀಡಬೇಕು ಎಂದು ಮನವಿ ಮಾಡಿದರು.
ಮುಖ್ಯ ಅತಿಥಿ ಬಾಲಾಜಿ ಸಕ್ಕರೆ ಕಾರ್ಖಾನೆಯ ಹಿರಿಯ ಇಂಜಿನಿಯರ್ ಅನಿಲ್ ರೆಡ್ಡಿ ಮಾತನಾಡಿ, ಐಟಿಐ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗವನ್ನೇ ಅವಲಂಬಿಸದೆ ಕೈಗಾರಿಕಾ ಕ್ಷೇತ್ರದತ್ತ ಗಮನ ಹರಿಸಬೇಕು. ಆರಂಭದಲ್ಲಿ 10 ಸಾವಿರ ವೇತನಕ್ಕೆ ಕೆಲಸಕ್ಕೆ ಸೇರಿ ಅನುಭವ ಪಡೆದವರು ಇಂದು 50ಹಿ60 ಸಾವಿರಕ್ಕೂ ಹೆಚ್ಚು ವೇತನ ಪಡೆಯುತ್ತಿದ್ದಾರೆ. ನಿರಂತರ ಪ್ರಯತ್ನ ಹಾಗೂ ಕಾರ್ಯದಕ್ಷತೆ ಬೆಳೆಸಿಕೊಳ್ಳಬೇಕು ಎಂದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 