ಪಂಚ ಗ್ಯಾರಂಟಿ ಯೋಜನೆ ಯಿಂದ ರೂ. 270 ಕೋಟಿ ಹಣ ಜಮೆ
Grihalakshmi money deposited for 1054 deceased women
1054 ಮೃತ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆ
ಹೂವಿನಹಡಗಲಿ 02: ಪಂಚ ಗ್ಯಾರಂಟಿ ಯೋಜನೆಯಿಂದ 2026ನೇ ಸಾಲಿನ ಮಾರ್ಚ, ಏಪ್ರಿಲ್ ತಿಂಗಳು ಹೊರತುಪಡಿಸಿ ಈವರೆಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೂ. 270ಕೋಟಿ ಹಣ ಪಾವತಿಯಾಗಿದೆ. 1054 ಮೃತ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ ಆಗಿದೆ ಎಂದು ಸಿಡಿಪಿಒ ರಾಮನಗೌಡ ಹೇಳಿದರು.ಹೂವಿನಹಡಗಲಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿ ಮಾಹಿತಿ ನೀಡಿ 710 ಮೃತ ಮಹಿಳೆಯರನ್ನು ಪತ್ತೆ ಮಾಡಲಾಗಿದೆ. ಇನ್ನು 344 ಜನ ಮಾಹಿತಿ ಸಂಗ್ರಹಿಸುತ್ತೇವೆ ಎಂದು ಸಭೆಗೆ ಮಾಹಿತಿ ನೀಡಿದರು.
ತಾಲೂಕಿನಲ್ಲಿ ಈವರೆಗೂ 1205 ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಿದ್ದು, 8.89 ಲಕ್ಷ ದಂಡ ವಸೂಲಿ ಮಾಡಲಾಗಿದೆ. 53176 ಬಿಪಿಎಲ್ ಕಾರ್ಡ್‌ಗಳಿಗೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ನರೀಕ್ಷಕ ನಾಗೇಂದ್ರ ಮಾಹಿತಿ ನೀಡಿದರು.ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗ ಬಾರದು ಎಂದು ಪಂಚ ಗ್ಯಾರಂಟಿ ಯೋಜನೆ ತಾಲೂಕು ಅದ್ಯಕ್ಷ ಪಿಟಿ.ಭರತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ತಾ.ಪಂ.ಇಒ ಪರಮೇಶ್ವರ್ಪ, ಜಿಲ್ಲಾ ಸಮಿತಿ ಸದಸ್ಯ ಗುರುವಿನ ರಾಜು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 