1.02 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
ಲೋಕದರ್ಶನ ವರದಿ
ಯಮಕನಮರಡಿ 02 : ವಿಧಾನಸಭಾ ಕ್ಷೇತ್ರದ ಹುದಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಚಂದಗಡ ಗ್ರಾಮದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು 1.02 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. 40 ಲಕ್ಷ ವೆಚ್ಚದ ಸಿಸಿ ರಸ್ತೆ, 35 ಲಕ್ಷದ ಗೋಕಾಕ ಗೇಟ್ ರಸ್ತೆ, 12 ಲಕ್ಷದ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಹಾಗೂ 15 ಲಕ್ಷ ವೆಚ್ಚದ ಗಣಪತಿ ದೇವಸ್ಥಾನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳು ನಿರಂತರವಾಗಿ ನಡೆಯಲಿವೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ, ಸಚಿವರ ಆಪ್ತ ಸಹಾಯಕ ಅರವಿಂದ ಕಾರ್ಚಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.