ಬಾಗಲಕೋಟೆ

ಕಾಡರಕೊಪ್ಪ, ಅನವಾಲ ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ೧೭ ರಂದು ಬಾಗಲಕೋಟೆಗೆ ಸಿಎಂ ಡಿ.ಕೆ.ಶಿವಕುಮಾರ

ಕಾಡರಕೊಪ್ಪ, ಅನವಾಲ ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ೧೭ ರಂದು ಬಾಗಲಕೋಟೆಗೆ ಸಿಎಂ ಡಿ.ಕೆ.ಶಿವಕುಮಾರ
Groundbreaking ceremony for the Kadarakoppa-Anaval Lift Irrigation Project; CM D.K. Shivakumar to vi
ಬಾಗಲಕೋಟೆ  : ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಬಾದಾಮಿ ತಾಲೂಕಿನ ಕಾಡರಕೊಪ್ಪ ಹಾಗೂ ಅನವಾಲ ಏತ ನೀರಾವರಿ ಯೋಜನೆಗಳಿಗೆ ಅಕ್ಟೋಬರ್ ೧೭ ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೂಮಿಪೂಜೆ ನೆರವೇರಿಸಲು ಆಗಮಿಸಲಿದ್ದಾರೆಂದು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಭೂಮಿಪೂಜೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲು ಕೈಗೊಳ್ಳಬೇಕಾದ ಅಗತ್ಯ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಯಕ್ರಮಕ್ಕೆ ೨೦ ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಸಮರ್ಪಕ ಆಸನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಉಪಹಾರ ಕಲ್ಪಿಸುವಂತೆ ತಿಳಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು ಎಂದು ಸೂಚಿಸಿದರು.

ಸುದ್ದಿ ಓದಿ