ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಲೋಕದರ್ಶನ ವರದಿ
ಹೂವಿನಹಡಗಲಿ ನ.17: ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಾಗ ಸ್ವಲ್ಪಬಡಕೂಲಿಕಾರರ ಏಳ್ಗೆ ಕುರಿತು ಚಿಂತನೆ ಮಾಡುವುದು ಮುಖ್ಯವಾಗಿದೆ. ಅದರಿಂದಾಗಿ ಸರ್ಕಾರದ ಅಭಿವೃದ್ಧಿ ಯೋಜನೆಗಳು ಗ್ರಾಮೀಣ ಭಾಗದಲ್ಲಿ ಕಾಮಗಾರಿಗಳು ಯಶಸ್ವಿಯಾಗಲು ಸಾಧ್ಯವಿದೆ ಎಂದು ಶಾಸಕ ಕೃಷ್ಣನಾಯಕ ಹೇಳಿದರು.
ತಾಲ್ಲೂಕಿನ ನವಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ನವಲಿ ಗ್ರಾಮಕ್ಕೆ ಎರಡು ಶುದ್ದ ಕುಡಿಯುವ ನೀರಿನ ಘಟಕ , ಸಿಸಿ ರಸ್ತೆ, ಸೊಲಾರ ಬೀದಿ ದೀಪಗಳು ಸೇರಿದಂತೆ ದೇಗುಲ ಭೂಮಿ ಪೂಜೆ, ಜೀರ್ಣೋದ್ಧಾರ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
’ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಪ್ರಮುಖ ಗುರಿಯಾಗಿದ್ದು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಂದು ಗ್ರಾಮಕ್ಕೂ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಲಾಗುತ್ತಿದೆ’ ಎಂದರು.ಕಾಗನೂರು,ರಾಜವಾಳ,ಅಲ್ಲಿಪುರ, ನವಲಿ ಗ್ರಾಮಸ್ಥರು ಇದ್ದರು.