ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ, ಜಿಮ್ ಹಾಲ್ಗೆ ಭೂಮಿಪೂಜೆ
Groundbreaking ceremony for wrestling and gym hall at the district stadium
ಲೋಕದರ್ಶನ ವರದಿ
ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ, ಜಿಮ್ ಹಾಲ್ಗೆ ಭೂಮಿಪೂಜೆ
ಧಾರವಾಡ 11: ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕುಸ್ತಿ ಹಾಲ್ ಹಾಗೂ ಜಿಮ್ ಹಾಲ್ ಕಾಮಗಾರಿಗೆ ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ, ಧಾರವಾಡ ಜಿಲ್ಲಾ ಕ್ರೀಡಾಂಗಣದಲ್ಲಿ ಮತ್ತೊಂದು ಒಳಾಂಗಣ ಕ್ರೀಡಾ ಸೌಲಭ್ಯ ನಿರ್ಮಾಣ ವಾಗುತ್ತಿರುವುದು ಸಂತಸದ ಸಂಗತಿ ಎಂದರು. ಕಳೆದ 3-4 ವರ್ಷಗಳಲ್ಲಿ ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಸ್ಕೆಟ್ಬಾಲ್ ಮೈದಾನ ಉದ್ಘಾಟಿಸಲಾಗಿದ್ದು, ವಾಲಿಬಾಲ್ ಕೋರ್ಟ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಆಧುನಿಕ ಕುಸ್ತಿ ಹಾಲ್ ಹಾಗೂ ಜಿಮ್ ಹಾಲ್ ನಿರ್ಮಿಸಲಾಗುತ್ತಿದೆ. ಕುಸ್ತಿ ಹಾಲ್ನ ಅಡಿಪಾಯ ಕಾಮಗಾರಿ ಪೂರ್ಣಗೊಂಡಿದ್ದು, ಪಿಲ್ಲರ್ಗಳನ್ನು ನಿರ್ಮಿಸಿ ಸ್ಲ್ಯಾಬ್ ಅಳವಡಿಸುವ ಕಾರ್ಯ ಮುಂದುವರಿಯಲಿದೆ. ಜಿಮ್ ಹಾಲ್ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ ಎಂದರು. ಧಾರವಾಡವನ್ನು ‘ವಿದ್ಯಾಕಾಶಿ’ ಎಂದು ಕರೆಯಲಾಗುತ್ತದೆ. ಶಿಕ್ಷಣದ ಜತೆಗೆ ಸಂಗೀತ, ಸಾಹಿತ್ಯ ಹಾಗೂ ಕ್ರೀಡೆಯೂ ಪ್ರಮುಖ ಕ್ಷೇತ್ರಗಳಾಗಿವೆ. ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಉತ್ತೇಜನ ನೀಡಬೇಕು ಎಂದು ಅವರು ಹೇಳಿದರು.
ಇದೇ ವೇಳೆ, ಹುಬ್ಬಳ್ಳಿ ನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಿವಿಧೋದ್ದೇಶ ಕ್ರೀಡಾ ಸಂಕೀರ್ಣ ನಿರ್ಮಾಣವಾಗುತ್ತಿದ್ದು, ಅಲ್ಲಿ 21 ವಿವಿಧ ಕ್ರೀಡೆಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು. ಕ್ರೀಡಾ ಇಲಾಖೆಯ ಕುಸ್ತಿ ತರಬೇತುದಾರ ಶಿವಪ್ಪ ಪಾಟೀಲ ಮಾತನಾಡಿ, ಜಿಲ್ಲಾ ಕ್ರೀಡಾ ವಸತಿ ನಿಲಯದ ಕುಸ್ತಿ ಪಟುಗಳಿಗೆ ನೂತನ ಕುಸ್ತಿ ಹಾಲ್ ಉತ್ತಮ ತರಬೇತಿಗೆ ಸಹಕಾರಿಯಾಗಲಿದೆ. ಸೂಕ್ತ ತರಬೇತಿ ಹಾಗೂ ಸೌಲಭ್ಯ ದೊರೆತರೆ ಜಿಲ್ಲೆಯ ಕುಸ್ತಿ ಪಟುಗಳು ಇನ್ನಷ್ಟು ಉನ್ನತ ಸಾಧನೆ ಮಾಡಲಿದ್ದಾರೆ ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಎಚ್. ಅಮರಾಪುರ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಿನ್ನಪ್ಪ ಕುಂದಗೋಳ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಂಡಳಿ ಅಧ್ಯಕ್ಷ ಮಂಜುನಾಥ ಮಲ್ಲಿಗವಾಡ, ಮಹಾನಗರ ಪಾಲಿಕೆ ಸದಸ್ಯ ಸುರೇಶ ಬೇದ್ರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಗರಗ, ಮಾಜಿ ಪೈಲ್ವಾನರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಶೋಕ ಏಣಿಗಿ, ಮಾಜಿ ಪೈಲ್ವಾನ ಗುರುನಾಥ ದಾನೇನ್ನವರ, ಫಕ್ಕೀರ್ಪ ದುರ್ಗಣ್ಣವರ, ಲಿಂಗರಾಜ ಹಡಪದ, ಶಿವಪ್ಪ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 