ಗೃಹಜ್ಯೋತಿ ಸಮೀಕ್ಷೆ: ಆಗಸ್ಟ್ 15ರೊಳಗೆ ನೋಂದಣಿ ಮಾಡಿಕೊಳ್ಳಲು ಮನವಿ
ಜಂಬಗಿ 09 : ರಾಜ್ಯ ಸರ್ಕಾರದ ಆದೇಶದಂತೆ 52555 ಗೃಹಜ್ಯೋತಿ ಅರ್ಜಿಗಳ ಪೈಕಿ ಉಪವಿಭಾಗದ ವ್ಯಾಪ್ತಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದು, ಉಳಿದ ಫಲಾನುಭವಿಗಳು ಆಗಸ್ಟ್ 15ರೊಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಉಪವಿಭಾಗದ ಎಂಜಿನಿಯರ್ ಎಸ್.ಎ. ಪಾರ್ಥನಹಳ್ಳಿ ತಿಳಿಸಿದರು. ಜಂಬಗಿ ವಲಯ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಗೃಹಜ್ಯೋತಿ ಯೋಜನೆಯ ಸಮೀಕ್ಷೆ ನಡೆಸಲಾಗುತ್ತಿದೆ.
ವೈವರ್ಾ್ಯುನ್ಗಳು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಅಗತ್ಯ ಮಾಹಿತಿಯನ್ನು ಒದಗಿಸಿ ಸಹಕರಿಸಬೇಕು. ಮಾಹಿತಿ ನೀಡದಿದ್ದಲ್ಲಿ ಭವಿಷ್ಯದಲ್ಲಿ ಉಂಟಾಗಬಹುದಾದ ಯಾವುದೇ ಸಮಸ್ಯೆಗೆ ಹೆಸ್ಕಾಂ ಜವಾಬ್ದಾರರಾಗಿರುವುದಿಲ್ಲ ಎಂದು ಹೇಳಿದರು. ಸಮೀಕ್ಷೆ ಸಂದರ್ಭದಲ್ಲಿ ಗ್ರಾಹಕರ ಆಧಾರ್ ಕಾರ್ಡ, ಪ್ಯಾನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಲಾಗುತ್ತಿದೆ. ಈ ಕಾರ್ಯಕ್ಕೆ ಎಲ್ಲ ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪ್ರಸ್ತುತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಪ್ರಾಣಿಗಳನ್ನು ಕಟ್ಟಬಾರದು. ವಿದ್ಯುತ್ ತಂತಿಗಳನ್ನು ಮುಟ್ಟಬಾರದು. ಖಾಸಗಿ ವ್ಯಕ್ತಿಗಳು ವಿದ್ಯುತ್ ಕಂಬಗಳ ಮೇಲೆ ಹತ್ತಬಾರದು. ಯಾವುದೇ ರೀತಿಯ ವಿದ್ಯುತ್ ಅವಘಡ ಸಂಭವಿಸಿದಲ್ಲಿ ಅದಕ್ಕೆ ಹೆಸ್ಕಾಂ ಜವಾಬ್ದಾರರಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ವಲಯ ಅಧಿಕಾರಿ ಕೆ.ಎಸ್. ಟಕ್ಕಣ್ಣವರ ಹಾಗೂ ಫೋಟೋ ಎಂಜಿನಿಯರ್ ಎಸ್.ಎ. ಪಾರ್ಥನಹಳ್ಳಿ ಉಪಸ್ಥಿತರಿದ್ದರು.