ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣ: ಫಲಾನುಭವಿಗಳೊಂದಿಗೆ ಸಂವಾದ
ಬ್ಯಾಡಗಿ 20 : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ ಯೋಜನೆಯು ಜಾರಿಯಾಗಿ ಮೂರು ವರ್ಷಗಳು ಪೂರ್ಣಗೊಂಡಿದ್ದು, ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಸಸಿಗಳನ್ನು ನೆಟ್ಟು ಯೋಜನೆ ಸಾಧನೆಯನ್ನು ಸಂಭ್ರಮಿಸಿ ಬಳಿಕ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಾಯಿತು. ತಾಲೂಕು ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಮಲ್ಲಿಕಾರ್ಜುನ್ ಮಾತನಾಡಿ ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಹಾಗೂ ಇತರೆ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳಬೇಕೆಂದು ರಾಜ್ಯ ಸರ್ಕಾರ ಸರಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು ಮಹಿಳೆಯರು ಸ್ವಾವಲಂಬಿಗಳಾಗಲಿ ಎಂದು ಸರಕಾರ ಪ್ರತಿ ಮನೆಯ ಕುಟುಂಬದ ಮಹಿಳೆಗೆ 2000 ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಂಭನಗೌಡ ಪಾಟೀಲ ಮಾತನಾಡಿ, ಗೃಹಲಕ್ಷಿಯಿಂದಾಗಿ ಮಹಿಳೆಯರಿಗೆ ಅನುಕೂಲವಾಗಿದ್ದು, ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ. ಉಳಿದ ಗ್ಯಾರಂಟಿಗಳು ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಇದು ಖುಷಿಯ ಸಂಗತಿ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಮಲ್ಲಿಕಾರ್ಜುನ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ. ಗ್ಯಾರಂಟಿ ಸದಸ್ಯರಾದ ರಮೇಶ್ ಕೋಟಿಯವರ. ಪಿರಾಂಬಿ ವರದಿ. ಬಾಬು ಸಾಬ್ ಓಲೆಕಾರ್. ಎಲ್ಲಾ ತಾಲೂಕು ಗ್ಯಾರಂಟಿ ಸದಸ್ಯರು ಹಾಗೂ ಅಂಗನವಾಡಿಯ ಶಿಕ್ಷಕಿಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.