ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಹೆಜ್ಜೆ: ಕೆ.ಇ. ಚಿದಾನಂದಪ್ಪ
Gruha Lakshmi Scheme is a significant step towards the economic empowerment of women: K.E. Chidanand
ಬಳ್ಳಾರಿ 20: ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ಯೋಜನೆಯಾಗಿದ್ದು, ಕುಟುಂಬಗಳ ಆರ್ಥಿಕ ಸ್ಥಿರತೆಗೆ ಪರಿಣಾಮಕಾರಿಯಾಗಿ ನೆರವಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹೇಳಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರ್ಣಗೊಳಿಸಿ ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬಳ್ಳಾರಿ ತಾಲ್ಲೂಕಿನ ಎಂ. ಗೋನಾಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಿಂದ ದೊರೆಯುತ್ತಿರುವ ಆರ್ಥಿಕ ನೆರವನ್ನು ಮಹಿಳೆಯರು ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಕುಟುಂಬ ನಿರ್ವಹಣೆಗೆ ಸಮರ್ಕವಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಅವರಲ್ಲಿ ಆತ್ಮವಿಶ್ವಾಸವೂ ಹೆಚ್ಚಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಹಕಾರಿಯಾಗಲಿವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಇದುವರೆಗೆ ಒಟ್ಟು ?2,470.01 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಗೆ ?1,167.58 ಕೋಟಿ, ಅನ್ನಭಾಗ್ಯ ಯೋಜನೆಗೆ ?471.28 ಕೋಟಿ, ಗೃಹಜ್ಯೋತಿ ಯೋಜನೆಗೆ ?494.82 ಕೋಟಿ, ಶಕ್ತಿ ಯೋಜನೆಗೆ ?303.29 ಕೋಟಿ ಹಾಗೂ ಯುವನಿಧಿ ಯೋಜನೆಗೆ ?33.04 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.
ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ. ನಾಗಭೂಷಣ ಗೌಡ ಮಾತನಾಡಿ, ಮಾಹಿತಿ ಕೊರತೆಯಿಂದ ಯಾವುದೇ ಅರ್ಹ ಫಲಾನುಭವಿಯು ಸರ್ಕಾರದ ಯೋಜನೆಗಳಿಂದ ವಂಚಿತರಾಗಬಾರದು. ಫಲಾನುಭವಿಗಳು ಬ್ಯಾಂಕ್ ಖಾತೆ, ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಿಕೊಳ್ಳಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 