ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆಮ್ಮದಿ
Guarantee schemes bring peace of mind to the common man
ಲೋಕದರ್ಶನ ವರದಿ
ಕೊಪ್ಪಳ 24: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ, ವಿಶೇಷವಾಗಿ ಮಹಿಳೆಯರ, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ಗಮನಾರ್ಹ ಪಾತ್ರ ವಹಿಸಿವೆ, ಅದರಿಂದ ಜನಸಾಮಾನ್ಯರಿಗೆ ನೆಮ್ಮದಿ ದೊರಕಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ. ಈ ಕುರಿತು ಅವರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಇತ್ತೀಚಿನ ಸಮೀಕ್ಷೆಗಳು ಮತ್ತು ಸರ್ಕಾರದ ಅಂಕಿ-ಅಂಶಗಳ ಪ್ರಕಾರ, ಇದರಿಂದ ಜನರಿಗೆ ಆಗುತ್ತಿರುವ ಪ್ರಮುಖ ಲಾಭಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಕುಟುಂಬಗಳ ಆರ್ಥಿಕ ಹೊರೆ ಇಳಿಕೆ ಗೃಹ ಲಕ್ಷಿ-್ಮ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ಲಭಿಸುವ 2,000 ಹಣವು ಕುಟುಂಬದ ನಿರ್ವಹಣೆಗೆ ದೊಡ್ಡ ಆಸರೆಯಾಗಿದೆ. ಅನೇಕ ಮಹಿಳೆಯರು ಈ ಹಣವನ್ನು ಮಕ್ಕಳ ಶಿಕ್ಷಣ, ಸಣ್ಣಪುಟ್ಟ ಸಾಲ ತೀರಿಸಲು ಅಥವಾ ದೈನಂದಿನ ಅಗತ್ಯಗಳಿಗೆ ಬಳಸುತ್ತಿದ್ದಾರೆ. ನೇರ ಹಣದ ನೆರವು ಇದಾಗಿದ್ದು, ಫಲಾನುಭವಿಯ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹೋಗಿರುವದರಿಂದ ಮಧ್ಯವರ್ತಿ ಅಥವಾ ಸರಕಾರ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ, ಈ ಕುರಿತು ವಿರೋಧ ಪಕ್ಷಗಳು ಕೊಡುವ ಹೇಳಿಕೆಗಳು ಕೇವಲ ಸುಳ್ಳು ಮತ್ತು ರಾಜಕೀಯ ಪ್ರೇರಿತವಾಗಿವೆ. ಇಂತಹ ಹೇಳಿಕೆಗಳ ವಿರುದ್ಧ ಕಾನೂನು ಮೊರೆ ಹೋಗುವ ಕುರಿತು ಚಿಂತನೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 