ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅರ್ಥಪೂರ್ಣ ಆಚರಣೆಗೆ ಸೂಚನೆ

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅರ್ಥಪೂರ್ಣ ಆಚರಣೆಗೆ ಸೂಚನೆ  Guidelines for the meaningful celebration of Brahmashri Narayana Guru Jayanti

ಲೋಕದರ್ಶನ ವರದಿ 

ಗದಗ, ಆ.19: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.28ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್‌. ಅಧಿಕಾರಿಗಳಿಗೆ ಸೂಚಿಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ ವಿತರಿಸಲು ಕ್ರಮ ಕೈಗೊಳ್ಳಬೇಕು. ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಬೇಕು. ತಾಲೂಕು ಮಟ್ಟದಲ್ಲೂ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದರು.  

ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಕ್ರೀಡೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ ಜಯಂತಿ ದಿನದಂದು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.  

ಜಯಂತಿ ಅಂಗವಾಗಿ ಊಟೋಪಚಾರ ಮತ್ತು ವೇದಿಕೆ ವ್ಯವಸ್ಥೆ, ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.  ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀಕ್ಷಕ ರಾಜಕುಮಾರ ಸೊಪ್ಪದ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಗಣ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು.