ಗುಲಬರ್ಗಾ ವಿವಿ ಡಾ. ಬಾಬು ಜಗಜೀವನರಾಮ್ ಜಯಂತ್ಯುತ್ಸವ
ಗುಲಬರ್ಗಾ 05: ನಗರದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ದಿ: 05 ಏಪ್ರಿಲ್ 2023 ರಂದು ಡಾ. ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಹಾಗೂ ವಿಸ್ತರಣಾ ಸಂಸ್ಥೆಯು ಡಾ. ಬಾಬು ಜಗಜೀವನರಾಮ್ ಅವರ 116ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯಚಿನ್ನು ಸಮಾಜವಿಜ್ಞಾನ ನಿಕಾಯದ ಡೀನರಾದ ಪ್ರೊ. ವ್ಹಿ.ಟಿ. ಕಾಂಬಳೆ, ಕುಲಸಚಿವ ಡಾ. ಬಿ. ಶರಣಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ, ಡಾ. ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಹಾಗೂ ವಿಸ್ತರಣಾ ಸಂಸ್ಥೆಯ ನಿರ್ದೇಶಕ ಪ್ರೊ. ಕೆ. ಲಿಂಗಪ್ಪ, ಪ್ರೊ. ಬಿ.ಆರ್. ಕೆರೂರ, ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೆ. ವಿಜಯಕುಮಾರ, ಡಾ. ಎನ್.ಜಿ. ಕಣ್ಣೂರ, ಡಾ. ಹಣಮಂತ ಜಂಗೆ ಹಾಗೂ ಕಾನೂನು ವಿಭಾಗದ ಮುಖ್ಯಸ್ಥ ಡಾ. ದೇವಿದಾಸ ಮಾಲೆ ಅವರು ವಂದಿಸಿದರು. ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.