ಗುರು ಪೂರ್ಣಿಮೆ: ಪಂತ ಬಾಳೇಕುಂದ್ರಿಯಲ್ಲಿ ಭಕ್ತಿ ಸಂಭ್ರಮ
Guru Purnima: Devotional fervor at Pant Balekundri
ಬೆಳಗಾವಿ, ಜು. 30: ತಾಲೂಕಿನ ಸುಕ್ಷೇತ್ರ ಪಂತ ಬಾಳೇಕುಂದ್ರಿಯಲ್ಲಿ ಗುರು ಪೂರ್ಣಿಮೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಗುರು ಪೂರ್ಣಿಮೆ ಅಂಗವಾಗಿ ಶ್ರೀ ದತ್ತ ಮಹಾರಾಜರಿಗೆ ಅಭಿಷೇಕ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಬುಧವಾರ ಸಂಜೆದಿಂದಲೇ ಪವಾಡ ಪುರುಷ ಶ್ರೀ ದತ್ತ ಮಹಾರಾಜರ ದರ್ಶನಕ್ಕಾಗಿ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ರಾತ್ರಿಯಿಂದಲೇ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥಗಳಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಗುರುವಾರ ಬೆಳಗ್ಗಿನಿಂದಲೇ ಭಕ್ತರ ಆಗಮನ ಮತ್ತಷ್ಟು ಹೆಚ್ಚಾಗಿ, ಶ್ರೀ ದತ್ತ ಸಂಸ್ಥಾನದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕರ್ನಾಟಕದ ವಿವಿಧ ಜಿಲ್ಲೆಗಳೊಂದಿಗೆ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸಿ ಗುರು ಪೂರ್ಣಿಮೆಯ ಪವಿತ್ರ ಆಚರಣೆಯಲ್ಲಿ ಭಾಗವಹಿಸಿದರು.
ಪಂತ ಬಾಳೇಕುಂದ್ರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರು ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು. ಮಧ್ಯಾಹ್ನ ಭಕ್ತರಿಗೆ ಅನ್ನ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಭಕ್ತಿಭಾವದಿಂದ ಮಹಾಪ್ರಸಾದ ಸ್ವೀಕರಿಸಿದರು.
ಗುರು ಪೂರ್ಣಿಮೆಯ ಅಂಗವಾಗಿ ನಡೆದ ಕಾರ್ಯಕ್ರಮಗಳು ಶಾಂತಿ, ಸೌಹಾರ್ದತೆ ಹಾಗೂ ಆಧ್ಯಾತ್ಮಿಕ ವಾತಾವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಂತ ಬಾಳೇಕುಂದ್ರಿ ಗ್ರಾಮದ ಯುವಕರು ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಅನ್ನಪ್ರಸಾದ ವಿತರಿಸುವ ಮೂಲಕ ಸೇವಾಭಾವ ಮೆರೆದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 