ಗುರುವಂದನೆ, ಸ್ಮೇಹಿತರ ಸಮ್ಮಿಲನ ನಾಳೆ
Guru Vandana, gathering of friends tomorrow
ಗಂಗಾವತಿ 09: ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1997ಹಿ98್ಫೂ ಶೈಕ್ಷಣಿಕ ವರ್ಷದಲ್ಲಿ ಏಳನೆ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಜ. 11ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯ ಆವರಣದಲ್ಲಿ ಗುರುವಂದನೆ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
27 ವರ್ಷಗಳ ಬಳಿಕ ಒಂದೆಡೆ ಸೇರುತ್ತಿರುವ ವಿದ್ಯಾರ್ಥಿಗಳೇ ಹಣ ಹಾಕಿ ತಮಗೆ ಕಲಿಸಿದ ಗುರುಗಳಿಗೆ ಅಭಿನಂದಿಸುವ ಕಾರ್ಯಕ್ರಮ ನಡೆಸುತ್ತಿದ್ದು, ವಿದೇಶದಲ್ಲಿ ನೆಲೆಸಿರುವ ಹಾಗೂ ರಾಜ್ಯದ ವಿವಿಧೆಡೆ ಇರುವ ಹಳೆಯ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ. ಆಗ ಕಲಿಸಿದ ಗುರುಗಳು, ಅವರ ಕುಟುಂಬದವರು ಮತ್ತು ಶಾಲೆಯ ಈಗಿನ ಶಿಕ್ಷಕರು ಕೂಡ ಭಾಗವಹಿಸುತ್ತಿದ್ದಾರೆ. ಈ ಶಾಲೆಯಲ್ಲಿ ಗುರುವಂದನೆ ಹಾಗೂ ಸ್ನೇಹಿತರ ಸಮ್ಮಿಲನ ಆಯೋಜನೆಯಾಗಿದ್ದು ಮೊದಲ ಬಾರಿ.ಕೆಲವು ದಿನಗಳ ಹಿಂದೆಯಷ್ಟೇ ಕೆಲ ಸ್ನೇಹಿತರು ಪರಸ್ಪರ ಸಂಪರ್ಕಕ್ಕೆ ಬಂದು ವ್ಯಾಟ್ಸ್ ಆ್ಯಪ್ ಗ್ರೂಪ್ ರಚಿಸಿಕೊಂಡು ಉಳಿದ ಸ್ನೇಹಿತರನ್ನೂ ಒಂದೆಡೆ ಸೇರಿಸಿ ಈಗ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಾರ್ಯಕ್ರಮ ನಡೆಯುವ ಶಾಲೆಯ ಆವರಣವನ್ನು ಹಳೆಯ ವಿದ್ಯಾರ್ಥಿಗಳೇ ಸ್ವಚ್ಛಗೊಳಿಸಿ ಕಾರ್ಯಕ್ರಮ ಸಂಭ್ರಮದಿಂದ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.‘ಹಲವು ವರ್ಷಗಳ ಕಾಲ ಒಂದೇ ತರಗತಿಯಲ್ಲಿ ಓದಿ ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ನೆಲೆಸಿದ್ದ ಹಳೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರುತ್ತಿರುವುದು ಖುಷಿ ನೀಡುತ್ತಿದೆ. ಕಾರ್ಯಕ್ರಮ ಮಾಡಬೇಕೆನ್ನುವ ಆಸೆ ಅನೇಕ ಬಾರಿ ಬಂದಿದ್ದರೂ ಅದು ಈಡೇರಿಲಿಲ್ಲ. 27 ವರ್ಷಗಳ ಬಳಿಕ ಮೊದಲ ಬಾರಿಗೆ ಶಾಲೆಯಲ್ಲಿ ಕಾರ್ಯಕ್ರಮ ನಡೆಸುತ್ತಿರುವುದರಿಂದ ಪರಸ್ಪರ ಸ್ನೇಹಿತರ ಭೇಟಿಗೆ ಕುತೂಹಲಿಗಳಾಗಿದ್ದೇವೆ’ ಎಂದು ಶಾಲೆಯ ಹಳೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 